ಕಾರ್ಕಳ

ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು : ನೇಮಿರಾಜ ರೈ

ಕಾರ್ಕಳ : ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ನಿಟ್ಟೆ ಜವಳಿ ಪಾರ್ಕ್ ಯೋಜನೆಗೆ ಶಾಸಕರು ನಿರಾಸಕ್ತಿ ತೋರುತ್ತಿರುವುದು ಖಂಡನೀಯ ಎಂದು ನೇಮಿರಾಜ ರೈ ಆರೋಪಿಸಿದ್ದಾರೆ.

ಕಾರ್ಕಳ ಪತ್ರಿಕಾ ಭವನದಲ್ಲಿ ಸೆ. 16 ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತಸದ ವಿಚಾರ. ಸಭೆಯಲ್ಲಿ ಕರಾವಳಿಯ ನಿರುದ್ಯೋಗ ಸಮಸ್ಯೆ ಹಾಗೂ ಉದ್ಯೋಗ ಸೃಷ್ಟಿಯ ಕುರಿತು ಸಭೆಯಲ್ಲಿ ಚರ್ಚೆಯಾಗಬೇಕು ಎಂದು ಒತ್ತಾಯಿಸಿದರು.
ನಿಟ್ಟೆಯ ಜವಳಿ ಪಾರ್ಕ್‌ಗೆ ಮಂಜೂರಾತಿ ದೊರೆತು ಆರು ವರ್ಷ ಕಳೆದಿದ್ದರೂ ಯೋಜನೆ ಇನ್ನೂ ಕಾರ್ಯಗತಗೊಂಡಿಲ್ಲ. ಸರ್ಕಾರದಿಂದ 15 ಎಕರೆ ಜಾಗ ಮಂಜೂರಾಗಿದ್ದು, ರೂ.27.97 ಕೋಟಿ ಅನುದಾನವಿದೆ ಎನ್ನಲಾಗುತಿ ದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆನಂದ ಜೋಸೆಫ್, ಪೀಟರ್ ಸಾಲ್ಡಾನ, ಶೋಭಾ ಮೂಲ್ಯ, ಒಪೀಲಿಯಾ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Related posts

ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗಿ

Madhyama Bimba

ಅಂತರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ  ಮಿಂಚಿದ ಹಿರ್ಗಾನದ ಅದಿತಿ ಶರ್ಮಾ ಹಾಗೂ ರತಿ ಶರ್ಮಾ

Madhyama Bimba

ಮುದ್ರಾಡಿ ಪ್ರೌಢಶಾಲೆಯಲ್ಲಿ ನೇತಾಜಿ ಮತದಾರರ ಕ್ಲಬ್ ಆಶ್ರಯದಲ್ಲಿ ಶಾಲಾ ಸಂಸತ್ತು ಚುನಾವಣೆ 

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More