ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ಇವರ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಪ್ರೌಢಶಾಲೆಯ 17ರ ವಯೋಮಿತಿಯೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 14 ರ ವಯೋಮಿತಿಯೊಳಗಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

