Blog

ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿಯಾಗಿ 50 ಬೆಡ್ಡುಗಳ ಶಿಫಾರಸ್ಸು-ಸರ್ಕಾರಕ್ಕೆ ಮಿಥುನ್ ರೈ ಅಭಿನಂದನೆ

ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯದ ದೃಷ್ಟಿಯಿಂದ ಬಡಜನರಿಗೆ ಆಗುತ್ತಿರುವ ತೊಂದರೆಯನ್ನು ಮನಗಂಡು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮಿಥುನ್.ಎಂ ರೈಯವರ ಮನವಿಯಂತೆ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಮನವಿಗೆ ಕರ್ನಾಟಕ ಸರ್ಕಾರ ಸ್ಪಂದನೆ ನೀಡಿದೆ ಎಂದು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್ ಹಾಗೂ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪುರಂದರ ದೇವಾಡಿಗ  ತಿಳಿಸಿದ್ದಾರೆ.

ಇದೀಗ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಿಂದ ಹೆಚ್ಚುವರಿಯಾಗಿ 50 ಬೆಡ್ಡುಗಳನ್ನು ಶಿಫಾರಸ್ಸು ಮಾಡಿರುವ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ ಖಾದರ್‌ರವರಿಗೆ, ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ರೋಟರಿ ಕ್ಲಬ್ ಟೆಂಪಲ್ ಟೌನ್‌ನ ಪದಗ್ರಹಣ

Madhyama Bimba

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ’ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Madhyama Bimba

 ಮೂಡುಬಿದಿರೆ ರೋಟರಿ ಕ್ಲಬ್ ಪದಗ್ರಹಣ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More