ಮೂಡುಬಿದಿರೆ

ಮೂಡುಬಿದಿರೆ ಗಣೇಶೋತ್ಸವದಲ್ಲಿ ಮೋದಿ ಜನ್ಮದಿನದ ವಿಶೇಷ ಪೂಜೆ ,ಪ್ರಾರ್ಥನೆ

ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮುಲ್ಕಿ–ಮೂಡುಬಿದಿರೆ ಮಂಡಲದ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ದಾಮೋದರದಾಸ್ ಮೋದಿಜಿಯವರ 76ನೇ ಜನ್ಮದಿನಾಚರಣೆಯ ಪ್ರಯುಕ್ತ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮವು ನೆರವೇರಿತು.

ಕಾರ್ಯಕ್ರಮದಲ್ಲಿ ಶ್ರೀ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿಜಿಯವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶಸೇವೆಯ ನಿರಂತರ ಶಕ್ತಿಗಾಗಿ ಪ್ರಾರ್ಥಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಸದಸ್ಯರಾದ ಕೆ ಆರ್ ಪಂಡಿತ್, ಸುದರ್ಶನ್ ಎಂ, ಚೇತನ್ ಕುಮಾರ್ ಶೆಟ್ಟಿ, ಲಕ್ಷ್ಮಣ್ ಪೂಜಾರಿ, ಪ್ರಸಾದ್ ಕುಮಾರ್, ರಾಜೇಶ್ ನಾಯಕ್, ಕರುಣಾಕರ್ ಶೆಟ್ಟಿ, ಅಣ್ಣಪ್ಪ ಕೆ ಎಸ್, ಹರೀಶ್ ಎಂ ಕೆ, ಉಮೇಶ್ ಹೆಗಡೆ ,ರಾಜೇಶ್ ಶೆಟ್ಟಿ, ಪ್ರಜ್ವಲ್ ಶೆಣೈ ಉಪಸ್ಥಿತರಿದ್ದು ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಮೋದಿಜಿಯವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related posts

ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಕುಸ್ತಿ ಪಂದ್ಯಾಟ 2024: ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Madhyama Bimba

ಮೂಡುಬಿದಿರೆ ಆಡಳಿತ ಸೌಧದಲ್ಲಿ ಚಲನೆಯಿಲ್ಲದ ಲಿಫ್ಟ್?

Madhyama Bimba

ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 41 ವಿದ್ಯಾರ್ಥಿಗಳು ಉತ್ತೀರ್ಣ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More