ಕಾರ್ಕಳ: 2026-27ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಬಜಗೋಳಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲೂ ಅದ್ಭುತ ಸಾಧನೆ ಮಾಡಿದ್ದಾರೆ.
17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
