ಮಾರೂರು: ಮಾರೂರು ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಲಲಿತಾ ಅವರನ್ನು ಮಾರೂರು ಗುಡ್ಡಲಂಗಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಶಂಕರ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಗೋಪಾಲ ಎ. ಕೋಟ್ಯಾನ್, ಸುಶಾಂತ್ ಕರ್ಕೇರ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾ ಸುಶಾಂತ್, ಮಾಜಿ ಅಧ್ಯಕ್ಷೆ ಸರಸ್ವತಿ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಕಾಂತಿ ರವಿ ಸ್ವಾಗತಿಸಿದರು. ಲೋಲಾಕ್ಷಿ ಹರೀಶ್ ಸನ್ಮಾನ ಪತ್ರ ವಾಚಿಸಿದರು. ಲಕ್ಷ್ಮಿ ರಾಜೇಂದ್ರ ಧನ್ಯವಾದ ಸಮರ್ಪಿಸಿದರು.
