ಕಾರ್ಕಳ

ಎಸ್‌ವಿಟಿ: ರ್‍ಯಾಂಕ್ ವಿಜೇತರಿಗೆ ಅಭಿನಂದನಾ ಸಮಾರಂಭ

ಶ್ರೀ ವೆಂಕಟರಮಣ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಎ ಪರೀಕ್ಷೆಯಲ್ಲಿ 6 ನೇ ರ್‍ಯಾಂಕ್ ಗಳಿಸಿದ ಕು. ಶ್ರಮಾ ಪಿ. ಹೆಗ್ಡೆ ಮತ್ತು 7ನೇ ರ್‍ಯಾಂಕ್ ಗಳಿಸಿದ ಕು. ನವ್ಯ ಆಚಾರ್ಯ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್.ವಿ. ಎಜ್ಯುಕೇಷನ್ ಟ್ರಸ್ಟ್‌ನ ಉಪಾದ್ಯಕ್ಷರಾದ ಕೆ. ಕಮಲಾಕ್ಷ ಕಾಮತ್ ಮಾತನಾಡಿ ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಎಸ್.ವಿ.ಎಜ್ಯುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಪಿ ಶೆಣೈಯವರು ಮಾತನಾಡಿ ಇಂದು ಸನ್ಮಾನಗೊಂಡ ವಿದ್ಯಾರ್ಥಿನಿಯರು ಈಗ ಕಲಿಯುತ್ತಿರುವ ವಿದ್ಯಾರ್ಥಿನಿಯರಿಗೆ ಸ್ಪೂರ್ತಿಯಾಗಿದ್ದಾರೆ. ಇನ್ನೂ ಹೆಚ್ಚಿನ ವಿದ್ಯಾರ್ಥಿನಿಯರು ಈ ಸಾಧನೆಯನ್ನು ಮಾಡುವಂತಾಗಲಿ ಎಂದು ಹಾರೈಸಿದರು.

ಎಸ್.ವಿ. ಎಜ್ಯುಕೇಷನ್ ಟ್ರಸ್ಟ್‌ನ ಅಧ್ಯಕ್ಷರಾದ ವೈ.ಆರ್. ನರಸಿಂಹ ಶೆಣೈ ಅಧ್ಯಕ್ಷತೆ ವಹಿಸಿದ್ದರು.
ಎಸ್. ವಿ. ಎಜ್ಯುಕೇಷನ್ ಟ್ರಸ್ಟ್‌ನ ಕೋಶಾಧ್ಯಕ್ಷರಾದ ಐ. ರವೀಂದ್ರನಾಥ ಪೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಚಿದಾನಂದ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಸ್.ವಿ.ಟಿ ಸಹ ಸಂಸ್ಥೆಗಳ ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿನಿಯರು ಈ ಸಂದರ್ಭದಲ್ಲಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಗೀತಾ.ಜಿ ಸ್ವಾಗತಿಸಿದರು. ಉಪನ್ಯಾಸಕಿಯರಾದ ಡಾ| ಶ್ವೇತಾ ಮತ್ತು ಕು. ಸೋನಾ ಸನ್ಮಾನ ಪತ್ರಗಳನ್ನು ವಾಚಿಸಿದರು. ಉಪನ್ಯಾಸಕಿ ಅರ್ಪಿತಾ ಪಿ. ಜೈನ್ ವಂದಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರೇಖಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಾರ್ಕಳ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್‌ನ ನೂತನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ರಾಕೇಶ್ ಅಮೀನ್ ಪ್ರಧಾನ ಕಾರ್ಯದರ್ಶಿಯಾಗಿ ಅನೀಶ್ ತೆಂಡೂಲ್ಕರ್

Madhyama Bimba

ಬೈಲೂರು:  ಊರು ಬೋಡು ಪುದರ್ ಬೊಡ್ಚಿ ನಾಟಕದ ಶುಭಮುಹೂರ್ತ

Madhyama Bimba

ಸಾಲು ಮರದ ತಿಮ್ಮಕ್ಕನ ಜನ್ಮದಿನದಂದು ಬೈಲೂರಿನಲ್ಲಿ ಹಸಿರು ಸಂದೇಶ ಸಾರಿದ ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More