ಮೂಡುಬಿದಿರೆ

ಆಳ್ವಾಸ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರಗಳ ಕೊಡುಗೆ

ಮೂಡುಬಿದಿರೆಯ ಆಳ್ವಾಸ್ ಸಹಕಾರ ಸಂಘವು ತನ್ನ ಲಾಭದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ಗೆ ನಾಲ್ಕು ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಇದರ ಉದ್ಘಾಟನಾ ಸಮಾರಂಭವು ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನಡೆಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸುವ ಮೂಲಕ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರೋಗ್ಯ ಸೇವೆಯ ಅಗತ್ಯವಿರುವ ಜನರಿಗೆ ಗುಣಮಟ್ಟದ ಹಾಗೂ ಕೈಗೆಟಕುವ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇಂತಹ ಕೊಡುಗೆಗಳು ಮಹತ್ವದ್ದಾಗಿವೆ.

ಆಳ್ವಾಸ್ ಸಹಕಾರ ಸಂಘವು ಕಳೆದ ಒಂದು ದಶಕದಿಂದ ತನ್ನ ಕಾರ್ಯಚಟುವಟಿಕೆಗಳ ಮೂಲಕ ಉತ್ತಮ ಆರ್ಥಿಕ ಫಲಿತಾಂಶ ದಾಖಲಿಸುವುದರ ಜೊತೆಗೆ, ಸಂಘದ ಉದ್ದೇಶಕ್ಕೆ ಅನುಗುಣವಾಗಿ ಲಾಭಾಂಶದ ಒಂದು ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ. ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮೂಲಕ ಸಮಾಜದ ವಿವಿಧ ವರ್ಗಗಳ ಜನರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಡಯಾಲಿಸಿಸ್ ಯಂತ್ರಗಳ ಕೊಡುಗೆಯೂ ಇದೇ ಸಾಮಾಜಿಕ ಬದ್ಧತೆಯ ಮುಂದುವರಿದ ಭಾಗವಾಗಿದೆ.

ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ನಿಯಮಿತ ಡಯಾಲಿಸಿಸ್ ಚಿಕಿತ್ಸೆಯ ಅಗತ್ಯವಿರುತ್ತದೆ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ನಾಲ್ಕು ಯಂತ್ರಗಳು ಲಭ್ಯವಾಗುವುದರಿಂದ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಡಯಾಲಿಸಿಸ್ ಸೇವೆಯ ಸಾಮರ್ಥ್ಯ ಹೆಚ್ಚಲಿದ್ದು, ಹೆಚ್ಚಿನ ಸಂಖ್ಯೆಯ ರೋಗಿಗಳಿಗೆ ಸಮಯೋಚಿತವಾಗಿ ಚಿಕಿತ್ಸೆ ಒದಗಿಸಲು ಸಹಕಾರಿಯಾಗಲಿದೆ. ಇದರಿಂದ ಮೂಡುಬಿದಿರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಸ್ಥಳೀಯವಾಗಿಯೇ ಅಗತ್ಯ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ. ವಿನಯ್ ಆಳ್ವ, ಡಾ. ಹನಾ ಶೆಟ್ಟಿ, ಮುಖ್ಯ ಅತಿಥಿಯಾಗಿ ಭಾರತ್ ಇನ್‌ಫ್ರಾಸ್ಟ್ರಕ್ಚರ್, ಆಡಳಿತ ನಿರ್ದೇಶಕ ಮೊಹಮದ್ ಮುಸ್ತಫಾ, ವೈದ್ಯರಾದ ಡಾ. ರೇವತಿ ಭಟ್, ಡಾ. ಸದಾನಂದ ನಾಯಕ್, ಡಾ. ಹರೀಶ್ ನಾಯಕ್, ಆಳ್ವಾಸ್ ಸಹಕಾರ ಸಂಘದ ನಿರ್ದೇಶಕ ನಾರಾಯಣ ಪಿ.ಎಂ., ಜಯರಾಂ ಕೋಟ್ಯಾನ್, ಪ್ರಕಾಶಿನಿ ಹೆಗ್ಡೆ, ಡಾ ಕುರಿಯನ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಪಿತ ಶೆಟ್ಟಿ ಉಪಸ್ಥಿತರಿದ್ದರು.

Related posts

ಸೆ. 06ರಂದು ಮೂಡುಬಿದಿರೆಯಲ್ಲಿ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆ ಶುಭಾರಂಭ

Madhyama Bimba

ಬನ್ನಡ್ಕದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ : ಸಾಧಕರಿಗೆ ಸಮ್ಮಾನ

Madhyama Bimba

ಬೆಂಗಳೂರು ಪೇಜಾವರ ವಿದ್ಯಾ ಪೀಠದ ಪ್ರಧಾನ ಪಾಕ ಶಾಸ್ತ್ರ ಅರ್ಚಕರಾಗಿದ್ದ ಸೀತಾರಾಮ ಭಟ್ ಇನ್ನಿಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More