ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಲ್ಲಿಕಾ ಆಚಾರ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಪ್ರಾಸ್ತವಿಕಗಾಗಿ ಮಾತನಾಡಿದರು.
ಕೆನರಾ ಬ್ಯಾಂಕಿನ ಸಮಾಲೋಚಕರಾದ ಪ್ರದೀಪ್ ವಿಮಾ ಬಗ್ಗೆ ಮಾಹಿತಿ ನೀಡಿದರು.
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ತರಬೇತಿ ಬಗ್ಗೆ ಮಾಹಿತಿ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಹೆಚ್‌ಒ ಮೆರ್ಲಿನ್ ಅರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪಶು ಸಖಿ ಶಶಿಕಲಾ ಸ್ವಾಗತಿಸಿ, ಕೃಷಿ ಸಖಿ ಸುಮನ ಧನ್ಯವಾದವಿತ್ತರು. ಎಂಬಿಕೆ ವನಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
