ಕಾರ್ಕಳಹೆಬ್ರಿ

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲಭಾಗ್ಯ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಮರಾಠ ಮಿಲ್ಟ್ರೀ ಹೋಟೆಲ್, ಸ್ವಾವಲಂಬಿ ಸಾರಥಿ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ಸಾಲ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ www.kaushalkar.com ನಲ್ಲಿ ಆನ್‌ಲೈನ್ ಮೂಲಕ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  https://kmcdc.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 8867537799 / 080-29903994 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ:  ಪೌರಕಾರ್ಮಿಕರ ದಿನಾಚರಣೆ

Madhyama Bimba

ಹೆಬ್ರಿ: ಸ್ಕೂಟರ್‌ಗೆ ಕಾರು ಡಿಕ್ಕಿ-ಗಾಯ

Madhyama Bimba

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿಯನ್ನು ಸಮರ್ಥಿಸುತ್ತಿರುವ ಬಿಜೆಪಿ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More