ಮೈಸೂರು ದಸರಾ ಉತ್ಸವ- 2026 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ 20ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026”ನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.
ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1000.00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.inನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅ.5 ರ ಸಂಜೆ 5 ಗಂಟೆಯ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ನೊಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ ಸಲ್ಲಿಸಬಹುದಾಗಿದೆ. ನಿರ್ಮಿಸಲಾಗುವ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ದೂ.ಸಂಖ್ಯೆ :080-22484516 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
