ಕಾರ್ಕಳ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್.ಎಸ್ ದಿನಾಚರಣೆ ಆಚರಿಸಲಾಯಿತು.

ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿಯ ಪ್ರಾಂಶುಪಾಲರಾದ ಡಾ.ನಿಕೇತನ ಇವರು ಮುಖ್ಯಅತಿಥಿಯಾಗಿ ಆಗಮಿಸಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾನ್ಯ ವಿದ್ಯಾರ್ಥಿಗಳನ್ನು ಅಸಾಮಾನ್ಯ ಪ್ರತಿಭೆಗಳನ್ನಾಗಿ ರೂಪಿಸುವಲ್ಲಿ ಎನ್.ಎನ್.ಎಸ್ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ದೇಶದ ಸತ್ಪ್ರಜೆಗಳಾಗಿ ಮೂಡಿ ಬರಲಿ ಎಂದು ಹಾರೈಸಿದರು.

ಎನ್.ಎಸ್. ಎಸ್. ದಿನದ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಪೂರ್ವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಿ ಅಭಿನಂದಿಸಲಾಯಿತು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಮತ್ತು ಕಾಲೇಜಿನ ಉಪ ಪ್ರಾಂಶುಪಾಲರಾದ ರವಿ ಜಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕು.ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಯಂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞ ವೈದ್ಯರ ನೇಮಕಾತಿಗೆ ಕಾರ್ಕಳ ಮಹಿಳಾ ಮೋರ್ಚಾ ಆಗ್ರಹ

Madhyama Bimba

ಯೂತ್ ಬಿಲ್ಲವ ಸಂಘ ರಿ. ಕಾರ್ಕಳ: ಅನಿತಾ ಕಾಸರಗೋಡ್ ವಿರುದ್ಧ ಕೇಸ್ ದಾಖಲು

Madhyama Bimba

ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಗೀತ ತರಗತಿ ಪ್ರಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More