ಕಾರ್ಕಳ

ಕಾಬೆಟ್ಟು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ- ಸನ್ಮಾನ

ಕಾಬೆಟ್ಟು: ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಹ್ಯಾರಿಸ್ ಅವರ ನೇತೃತ್ವದಲ್ಲಿ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಶಾಲೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಣ ಹಾಗೂ ಯೋಗ ಶಿಕ್ಷಕರಾದ ನರೇಂದ್ರ ಕಾಮತ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಅಲ್ಲದೆ, ಪ್ರಸ್ತುತ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಏಳು ಮಂದಿ ಶಿಕ್ಷಕರನ್ನೂ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದ ಕೆ. ನವೀನ್ ಚಂದ್ರ ಶೆಟ್ಟಿ ಮಾತನಾಡಿ, ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ವಹಿಸುವ ಮಹತ್ವದ ಪಾತ್ರವನ್ನು ಸ್ಮರಿಸಿ, ಶಿಕ್ಷಕರ ಸೇವೆಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಯೋಗೀಶ್ ಕಿಣಿ, ಶತಮಾನೋತ್ಸವ ಸಮಿತಿಯ ಸದಸ್ಯರಾದ ವೈಕುಂಠ ಶೆಣೈ ಹಾಗೂ ಕಮಲಾಕ್ಷ, ಪುರಸಭಾ ಸದಸ್ಯೆ ರೆಹಮತ್ ಶೇಕ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿದರು. ಎಸ್‌ಡಿಎಂಸಿ ಮಾಜಿ ಅಧ್ಯಕ್ಷೆ ಶೋಭಾ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯರಾದ ಯೋಗೀಶ್ ಕಿಣಿ ವಂದಿಸಿದರು.

Related posts

ಕಾರ್ಕಳ: ಎಸ್.ವಿ.ಟಿ. ರೋಟರ್ಯಾಕ್ಟ್ ಕ್ಲಬ್ ಪದಗ್ರಹಣ

Madhyama Bimba

ಕ್ರೈಸ್ಟ್‌ಕಿಂಗ್: ತಂಬಾಕು ಸೇವನೆಯ ದುಷ್ಪರಿಣಾಮಗಳ ಮಾಹಿತಿ ಕಾರ್ಯಕ್ರಮ

Madhyama Bimba

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More