ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಹೆಬ್ರಿ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ವಕೀಲರಾದ ಶ್ರೀಮತಿ ಸಪ್ನಾ ಎನ್ ಶೆಟ್ಟಿ ಅವರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಣಿಪಾಲ ಅಕಾಡೆಮಿ ಹೈರ್ ಎಜುಕೇಶನ್‌ನ ವೈಸ್ ಚಾನ್ಸಲರ್ ಡಾ.ಕರುಣಾಕರ್ ಕೋಟೆಗಾರ, ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷರಾದ ರಶ್ಮಿ ಕೃಷ್ಣಪ್ರಸಾದ್, ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕರಾದ ಡಾ.ಕೃಷ್ಣ ಪ್ರಸಾದ್ ಹಾಗೂ ಉಡುಪಿ ಜಿಲ್ಲೆಯ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
