ಬೈಲೂರು: ವಿದ್ಯಾರ್ಥಿಗಳಲ್ಲಿ ಸುರಕ್ಷತೆ ಹಾಗೂ ಜಾಗೃತಿಯ ಅರಿವು ಮೂಡಿಸುವ ಉದ್ದೇಶದಿಂದ ಶಾಲೆಯಲ್ಲಿ ಪೊಲೀಸ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಅವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ವೈಯಕ್ತಿಕ ಸುರಕ್ಷತೆ, ಯಾವುದೇ ತೊಂದರೆ ಎದುರಾದಾಗ ದೂರು ನೀಡುವ ವಿಧಾನ ಹಾಗೂ ಶಾಲೆಯಲ್ಲಿ ಮತ್ತು ಶಾಲೆಯ ಹೊರಗೆ ಪಾಲಿಸಬೇಕಾದ ಸೂಕ್ತ ನಡವಳಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಅಲ್ಲದೆ, ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಸದಾ ಎಚ್ಚರಿಕೆಯಿಂದಿರಬೇಕು. ಯಾವುದೇ ರೀತಿಯ ಸಮಸ್ಯೆ ಅಥವಾ ತೊಂದರೆ ಎದುರಾದಾಗ ಭಯಪಡದೆ ಪೊಲೀಸ್ ಇಲಾಖೆ ಅಥವಾ ವಿಶ್ವಾಸಾರ್ಹ ಹಿರಿಯರ ಸಹಾಯವನ್ನು ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಸುರಕ್ಷತೆಯ ಬಗ್ಗೆ ಅಗತ್ಯವಾದ ಅರಿವು ಮತ್ತು ಜಾಗೃತಿ ಮೂಡಿಸಲಾಯಿತು.
ಶಾಲೆಯ ವತಿಯಿಂದ ಸಂತೋಷ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ವಿದ್ಯಾಲಯದ ಮುಖ್ಯೊಪಾಧ್ಯಾಯಿನಿ ಚಂದ್ರಿಕಾ ದಿವಾಕರ್ ದನ್ಯವಾದವಿತ್ತರು. ಸಹಶಿಕ್ಷಕ ವಿರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
