Blog

ಅಕ್ಟೋಬರ್ 5 ರಂದು ಕಾರ್ಕಳ ತಾಲೂಕು ಕಚೇರಿ ಮುಂಭಾಗ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಜನಹಿತ ಮರೆತಿದ್ದು, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಸರ್ಕಾರ ನಿದ್ದೆಯಲ್ಲಿದ್ದರೆ, ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈ ಭಂಡ ಸರ್ಕಾರದ ಕಿವುಡು ಕಿವಿಯನ್ನು ತೆರೆಸಲು ಇದೆ ಬರುವ ಸೋಮವಾರ ಅಕ್ಟೋಬರ್ 5, ರಂದು ಬೆಳಗ್ಗೆ 10.00ಗಂಟೆಗೆ ಕಾರ್ಕಳ ತಾಲೂಕು ಕಚೇರಿಯ ಮುಂಭಾಗ ಭಾರತೀಯ ಜನತಾ ಪಾರ್ಟಿ ವತಿಯಿಂದ ’ಬೃಹತ್ ಪ್ರತಿಭಟನಾ ಧರಣಿ’ ಹಮ್ಮಿಕೊಳ್ಳಲಾಗಿದೆ.

ಕಳೆದ ಮೂರು ವರ್ಷಗಳ ಕಾಂಗ್ರೆಸ್ ದುರಾಡಳಿತದಲ್ಲಿ ಅಭಿವೃದ್ಧಿ ಸಂಪೂರ್ಣ ಶೂನ್ಯವಾಗಿದೆ. ಬಡವರಿಗೆ ಸೂರು ಕಲ್ಪಿಸುವ ಆಶ್ರಯ ಯೋಜನೆಗೆ ಕನಿಷ್ಠ ಒಂದು ಮನೆಯನ್ನೂ ಮಂಜೂರು ಮಾಡದ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಈ ಜನವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ.

ಕಾರ್ಕಳ ಕ್ಷೇತ್ರದ ಮೇಲೆ ಸರ್ಕಾರದ ವ್ಯವಸ್ಥಿತ ವಂಚನೆ:

1. ಕಾರ್ಕಳ ತಾಲೂಕಿನಲ್ಲಿ ಅರ್ಹ ಬಡವರ ಬರೋಬ್ಬರಿ1000ಕ್ಕೂ ಹೆಚ್ಚು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಿ ಅನ್ಯಾಯ ಎಸಗಲಾಗಿದೆ. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನೇ ನೀಡದೆ ಬಡವರನ್ನು ವಂಚಿಸಲಾಗುತ್ತಿದೆ.

2. ಬಡ ರೈತರು ಮತ್ತು ಕುಟುಂಬಗಳು ಸಲ್ಲಿಸಿದ್ದ 10,090ಕ್ಕೂ ಹೆಚ್ಚು ಅಕ್ರಮ-ಸಕ್ರಮ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಿ ಜನರ ಕನಸನ್ನು ನುಚ್ಚುನೂರು ಮಾಡಲಾಗಿದೆ.

3. ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಸೇರಿದಂತೆ ಬಡವರ ಒಟ್ಟು 10,732ಕ್ಕೂ ಹೆಚ್ಚು ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ರದ್ದುಪಡಿಸಲು ಸೂಚನೆ ನೀಡಲಾಗಿದೆ.

ಸರ್ಕಾರದ ಆಡಳಿತ ವೈಫಲ್ಯ ಹಾಗೂ ದಬ್ಬಾಳಿಕೆ:

1. ಇ-ಸ್ವತ್ತು, 9 & 110 ಖಾತಾ ಮತ್ತು ಏಕವಿನ್ಯಾಸ (ಸಿಂಗಲ್ ಲೇಔಟ್) ಅನುಮೋದನೆಗಳ ಹೆಸರಿನಲ್ಲಿ ನಿಯಮಗಳನ್ನು ಬಿಗಿಗೊಳಿಸಿ ಸಾರ್ವಜನಿಕರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಿ ಲಂಚಗುಳಿತನಕ್ಕೆ ದಾರಿ ಮಾಡಿಕೊಡಲಾಗಿದೆ.

2. ಅರ್ಹ ಬಡವರ ಬಿಪಿಎಲ್ (BPL) ರೇಷನ್ ಕಾರ್ಡ್‌ಗಳನ್ನು ಅಮಾನವೀಯವಾಗಿ ರದ್ದುಗೊಳಿಸಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್ ಪಡೆಯಲು ಅವಕಾಶವನ್ನೇ ನೀಡುತ್ತಿಲ್ಲ.

3 ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿಗಳನ್ನು ಅನ್ಯಾಯವಾಗಿ ಕಡಿತಗೊಳಿಸಲಾಗುತ್ತಿದೆ.

4. ವಿದ್ಯುತ್ ದರವನ್ನು ಬೇಕಾಬಿಟ್ಟಿ ಹೆಚ್ಚಿಸಿ, ಮತ್ತೊಂದೆಡೆ ಹಳ್ಳಿ-ನಗರ ಎನ್ನದೆ ಅಘೋಷಿತ ಲೋಡ್ ಶೆಡ್ಡಿಂಗ್ ಹೇರಿ ಜನರ ವ್ಯಾಪಾರ, ಕೃಷಿ ಹಾಗೂ ದೈನಂದಿನ ಬದುಕನ್ನು ಹಾಳುಗೆಡವಲಾಗಿದೆ.

5. ಗ್ರಾಮೀಣ ರಸ್ತೆಗಳ ನಿರ್ವಹಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಬಿಡಿಗಾಸಿನ ಅನುದಾನವನ್ನೂ ನೀಡದೆ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ

6. 94ಸಿ ಹಾಗೂ ಬಗರ್‌ಹುಕುಂ ಅಕ್ರಮ-ಸಕ್ರಮ ಅರ್ಜಿಗಳನ್ನು ಪರಿಶೀಲಿಸದೇ ಅಧಿಕಾರಿಗಳ ಹಂತದಲ್ಲೇ ಸಾಮೂಹಿಕವಾಗಿ ತಿರಸ್ಕರಿಸಲಾಗುತ್ತಿದೆ.

ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು ಜಾರಿಗೆ ತಂದಿರುವ ಜನವಿರೋಧಿ ನೀತಿಗಳನ್ನು ಹಾಗೂ ಆದೇಶಗಳನ್ನುಹಿಂಪಡೆದು, ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಆಗ್ರಹಿಸುತ್ತೇವೆ. ಶಾಸಕರು ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರ ನಾಯಕತ್ವದಲ್ಲಿ ನಡೆಯಲಿರುವ ಈ ಬೃಹತ್ ಜನಾಕ್ರೋಶ ಪ್ರತಿಭಟನೆಯಲ್ಲಿ ಕಾರ್ಕಳದ ಸಮಸ್ತ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಹಾಗೂ ನೊಂದ ಫಲಾನುಭವಿಗಳು ಪಕ್ಷಾತೀತವಾಗಿ, ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಕುಂಭಕರ್ಣ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು. ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾಂತಾವರ ಶಾಲೆ

Madhyama Bimba

ಕುಲಾಲ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Madhyama Bimba

ಆಗಸ್ಟ್ 7 ರಂದು ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳಕ್ಕೆ ಚಾಲನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More