ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿ ಮತ್ತು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮುನಿಯಾಲು ಮತ್ತು ಆಳ್ವಾಸ್ ಹೆಲ್ತ್ ಸೆಂಟರ್ ಇವರ ಜಂಟಿ ಸಹಯೋಗದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿಯ ಪ್ರಯುಕ್ತ ಬೋಳ ಗ್ರಾಮದ ಶಿಲ್ಪ ಶ್ರೀ ಸಭಾಭವನದಲ್ಲಿ ಉಚಿತ ಮೆಗಾ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯ ಸಂದರ್ಭದಲ್ಲಿ ಗ್ರಾಮದ ಜನರ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನಡೆಸುವ ಶಿಬಿರವನ್ನು ಆಯೋಜಿಸಿರುವುದು ಗಾಂಧೀಜಿಯವರ ಸದೃಢ ಭಾರತದ ಕಲ್ಪನೆಗೆ ಪೂರಕವಾಗಿದೆ ಎಂದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಒಂದು ರಾಜಕೀಯ ಪಕ್ಷವು ಕೇವಲ ರಾಜಕೀಯ ಹಿತಾಸಕ್ತಿಗೆ ಮಾತ್ರವಲ್ಲದೆ, ಅಧಿಕಾರ ಚಲಾಯಿಸುವುದಕ್ಕೆ ಮಾತ್ರವಲ್ಲದೆ ಜನರ ಬದುಕಿಗೆ ಪೂರಕವಾದ ಜನರ ಬದುಕಿಗೆ ಅಗತ್ಯವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಎಷ್ಟು ಉತ್ತಮವಾಗಿ ಇರುತ್ತದೆ ಎನ್ನುವುದಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಈ ವೈದ್ಯಕೀಯ ತಪಾಸಣಾ ಶಿಬಿರವೇ ಸಾಕ್ಷಿ ಎಂದರು.
ಆಳ್ವಾಸ್ ಹೆಲ್ತ್ ಸೆಂಟರ್ ನ ವೈದ್ಯಾಧಿಕಾರಿಯಾದ ಡಾ. ದಿತೇಶ್. ಎಂ ಅವರು ಮಾತನಾಡಿ ಉತ್ತಮ ಆರೋಗ್ಯಕ್ಕಾಗಿ ಜನರು ತಮ್ಮ ದೈನಂದಿನ ದಿನಚರಿಯಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳನ್ನು ತಿಳಿಸಿದರು.
ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸುಧಾಕರ ಕೋಟ್ಯಾನ್, ರಾಜ್ಯ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ರಾಜ್ಯ ಮಹಿಳಾ ಕಾಂಗ್ರೆಸ್ಸಿನ ಪ್ರದಾನ ಕಾರ್ಯದರ್ಶಿ ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸಿನ ಅಧ್ಯಕ್ಷೆ ಶ್ರೀಮತಿ ಭಾನು ಬಾಸ್ಕರ ಪೂಜಾರಿ, ಆಳ್ವಾಸ್ ಹೆಲ್ತ್ ಸೆಂಟರ್ ನ ವೈದ್ಯಾಧಿಕಾರಿ ಡಾ. ಹನಾ ಶೆಟ್ಟಿ, ಮಾಜಿ ಜಿ.ಪಂ ಸದಸ್ಯರಾದ ಸುಪ್ರಿತ್ ಶೆಟ್ಟಿ ಕೆದಿಂಜೆ, ವಲಯ ಉಸ್ತುವಾರಿ ಕುಶ.ಆರ್.ಮೂಲ್ಯ, ಉದ್ಯಮಿ ಉದಯ ಶೆಟ್ಟಿ ಗುಂಡುಕಲ್ಲು, ಕಾಂತಾವರ ಮತ್ತು ಬೆಳ್ಮಣ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಬಾಂದೊಟ್ಟು ಸುದರ್ಶನ್ ಬಂಗೇರ, ಪ್ರಭಾಕರ ಶೆಟ್ಟಿ ಇಂದಾರು ಉಪಸ್ಥಿತರಿದ್ದರು.
ಆಧುನಿಕ ವೈದ್ಯಕೀಯ ಸೌಲಭ್ಯಗಳಿಲ್ಲದ ಕಾಲದಲ್ಲಿ ಮನೆಮನೆಗೆ ತೆರಳಿ ನೂರಾರು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಮಹಾತಾಯಿ ಬೋಳ ಗ್ರಾಮದ ಹಿರಿಯ ನಾಟಿ ಹೆರಿಗೆ ತಜ್ಞೆ ಶ್ರೀಮತಿ ಅಪ್ಪಿ ಪೂಜಾರಿ, ಬೋಳ ಗ್ರಾಮದ ಆರೋಗ್ಯಾಧಿಕಾರಿಗಳಿಗೆ ಮತ್ತು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಮಾರಿ ಶ್ರೇಯಾ ಮತ್ತು ಮಾನ್ವಿ ಪ್ರಾರ್ಥಿಸಿದರು, ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಯೋಗೀಶ್ ಮೂಲ್ಯ ಸ್ವಾಗತಿಸಿದರು ಹಾಗೂ ಬ್ಲಾಕ್ ಉಪಾಧ್ಯಕ್ಷ ಅವಿನಾಶ್ ಮಲ್ಲಿ ವಂದನಾರ್ಪಣೆಗೈದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.
