ಕಾರ್ಕಳ

ಎಸ್.ವಿ.ಟಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಎಂ.ಎನ್.ಡಿ.ಎಸ್.ಎಂ ಪ್ರೌಢಶಾಲೆ ಮುದ್ರಾಡಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಸಮೀಕ್ಷಾ ಮೂರು ಕಿಲೋಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸುಶಾಂತ್ ಐದು ಕಿಲೋಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪುಟ್ಟರಾಜ ಹೊಸಗೌಡ್ರ 800 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 1500 ಮತ್ತು 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಸಾಕ್ಷಿ ಜಿ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಪದವಿಪೂರ್ವ ವಿಭಾಗದ ಫುಟ್‌ಬಾಲ್‌ನಲ್ಲಿ ಕೈಸ್ಟ್‌ಕಿಂಗ್‌ನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

Madhyama Bimba

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More