ಕಾರ್ಕಳ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಸಾಧನೆ

ಉಡುಪಿ ಜಿಲ್ಲಾ ಪಂಚಾಯತಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟವು ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ 10ನೇ ತರಗತಿಯ ವಿಧಿತ್ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, 10ನೇ ತರಗತಿಯ ಪ್ರಣಮ್ ಹ್ಯಾಮರ್ ಥ್ರೋ ಮತ್ತು ಡಿಸ್ಕಸ್ ಥ್ರೋ (ಚಕ್ರ ಎಸೆತ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 10ನೇ ತರಗತಿಯ ಶ್ರಾವಣಿ 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

Related posts

ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ: ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ

Madhyama Bimba

ಸನ್‌ಮಾರ್ಗ್ ಎನರ್ಜಿಸ್ ಕಾರ್ಕಳದಲ್ಲಿ ಶುಭಾರಂಭ

Madhyama Bimba

ಕಾರ್ಕಳದ ನೂತನ ತಹಶೀಲ್ದಾರ್ ಆಗಿ ಮಂಜುಳಾ ಕೆ ನಾಯ್ಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More