ಕಾರ್ಕಳ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಅ.8ರಂದು ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಯನ್ನು ಖಂಡಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಅ.5ರಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ನಾಯಕರುಗಳು ಉಪಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯಗಳನ್ನು ವಿರೋಧಿಸಿ ಕಾರ್ಕಳದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಪ್ರತಿಯಾಗಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಅ.8ರಂದು ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಬಿಜೆಪಿ ಸಂಸದರು, ಶಾಸಕರು ಮತ್ತು ಮುಖಂಡರ ವಿರುದ್ಧ ಕಾಂಗ್ರೆಸ್ ನಾಯಕರು ನಡೆಸಿದ್ದ ಕೀಳು ಮಟ್ಟದ ವೈಯಕ್ತಿಕ ನಿಂದನೆ ಮತ್ತು ತೇಜೋವಧೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನ್ಯಾಯ ಸಮ್ಮತ ಪ್ರತಿಭಟನೆ ಮತ್ತು ಹೋರಾಟಗಳಿಗೆ ಮುಕ್ತ ಅವಕಾಶವನ್ನು ಸಂವಿಧಾನ ನೀಡಿದೆ. ಅದರೆ ಯಾವುದೇ ಒಂದು ನಿರ್ದಿಷ್ಟ ವಿಷಯ ಅಥವಾ ಬೇಡಿಕೆಗಳ ಚೌಕಟ್ಟು ಮತ್ತು ನಾಗರಿಕ ಸಮಾಜದ ಸಭ್ಯತೆಯನ್ನು ಮೀರಿ ಕಾರ್ಕಳ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಕಾರ್ಕಳ ಶಾಸಕರ ಸಹಿತ ಜಿಲ್ಲೆಯ ಸಂಸದರು, ಶಾಸಕರು ಮತ್ತು ಬಿಜೆಪಿ ಮುಖಂಡರ ವೈಯಕ್ತಿಕ ನಿಂದನೆಗೈದು ಅವರ ಕೌಟುಂಬಿಕ ವಿಚಾರಗಳನ್ನೂ ಎಳೆದು ತಂದು ಕೀಳು ಮಟ್ಟದ ಪದ ಪ್ರಯೋಗದೊಂದಿಗೆ ಅವಮಾನಿಸಿರುವುದನ್ನು ಸರ್ವತಾ ಒಪ್ಪಲಾಗದು ಎಂದು ಜಿಲ್ಲಾ ಮಹಿಳಾ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ಪದೇ ಪದೇ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಸಹಿತ ಸತ್ಯಕ್ಕೆ ದೂರವಾದ ಅಸಂಬದ್ಧ ವಿಚಾರಗಳನ್ನೇ ಬಂಡವಾಳವನ್ನಾಗಿರಿಸಿಕೊಂಡು ಪ್ರತಿಭಟನೆಯ ಪ್ರಹಸನದಲ್ಲಿ ಬಿಜೆಪಿ ಜನಪ್ರತಿನಿಧಿಗಳು ಮತ್ತು ಪಕ್ಷದ ನಾಯಕರನ್ನು ಅವಾಚ್ಯ ಪದಗಳಿಂದ ತೆಗಳಿ, ಹೀಯಾಳಿಸಿ, ಮೋಜು ಮಸ್ತಿ ಮಾಡುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುವಂತಹ ಇಂತಹ ವಸ್ತುನಿಷ್ಠವಲ್ಲದ ಪ್ರತಿಭಟನಾ ಸಭೆಗಳಿಗೆ ಜಿಲ್ಲೆಯಾದ್ಯಂತ ಯಾವುದೇ ಅವಕಾಶಗಳನ್ನು ನೀಡಬಾರದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಮುಖಂಡರ ಕುರಿತು ವಿಜೃಂಭಿಸುವ ವಿಕೃತ ಪೋಸ್ಟ್ ಗಳಿಗೆ ಕಡಿವಾಣ ಹಾಕುವ ಜೊತೆಗೆ ಪಕ್ಷದ ಸಂಸದರು, ಶಾಸಕರು ಮತ್ತು ಬಿಜೆಪಿ ನಾಯಕರುಗಳನ್ನು ನಿಂದಿಸಿ, ಅವಮಾನಿಸಿ, ತೇಜೋವಧೆಗೈದ ಕಾಂಗ್ರೆಸ್ ಮುಖಂಡರ ವಿರುದ್ಧ ಸೂಕ್ತ ಸ್ವಯಂ ಪ್ರೇರಿತ ಕ್ರಮಗಳನ್ನು ಕೈಗೊಂಡು ಸಭ್ಯ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ಉಡುಪಿ ಜಿಲ್ಲೆಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಹಾಗೂ ಕಾರ್ಯಕಾರಿಣಿ ಸದಸ್ಯೆ ಮಂಜುಳಾ ಪ್ರಸಾದ್ ಮಾತನಾಡಿ ಅನಪೇಕ್ಷಿತ ಘಟನೆಯ ವಸ್ತುಸ್ಥಿತಿಯನ್ನು ಜಿಲ್ಲಾಧಿಕಾರಿಗಳಿಗೆ ವಿವರಿಸಿ, ಸೂಕ್ತ ಮುಂಜಾಗರೂಕತೆಯ ಕ್ರಮಗಳಿಗೆ ಅಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜ್ಯೋತಿ ಉದಯ ಪೂಜಾರಿ, ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯದರ್ಶಿ ಶೋಭಾ ಭಾಸ್ಕರ್, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಸುಜಾಲ ಸತೀಶ್, ಮಾಲಿನಿ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಜ್ಯೋತಿ ರಮೇಶ್, ನಿರ್ಮಲಾ ಶೆಟ್ಟಿ, ಮಾಲಿನಿ ಜತ್ತನ್ನ, ವಿದ್ಯಾ ಶ್ಯಾಮಸುಂದರ್, ಉಡುಪಿ ಮಂಡಲ ಪ್ರ.ಕಾರ್ಯದರ್ಶಿ ತ್ರಿವೇಣಿ ಅಮೀನ್, ಗ್ರಾಮಾಂತರ ಅಧ್ಯಕ್ಷೆ ರಮ್ಯಾ ರಾವ್, ಪ್ರ.ಕಾರ್ಯದರ್ಶಿ ಜ್ಯೋತಿ, ಕಾರ್ಕಳ ಅಧ್ಯಕ್ಷೆ ವಿನಯಾ ಡಿ. ಬಂಗೇರ, ಪ್ರ.ಕಾರ್ಯದರ್ಶಿ ವಿನುತಾ ಆಚಾರ್ಯ, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್, ಪ್ರಮುಖರಾದ ಶ್ರೀಲತಾ ಶೆಟ್ಟಿ, ಕವಿತಾ, ನಿರುಪಮಾ, ದಯಾಶಿನಿ, ಸುಧಾ ಎಸ್. ಪೈ, ಸರೋಜ ಶೆಣೈ, ಸುಗುಣ ನಾಯ್ಕ್, ಸುವರ್ಣ, ಪಲ್ಲವಿ ಪ್ರವೀಣ್, ಆಶಾ ದೇವೇಂದ್ರ ಶೆಟ್ಟಿ, ಶುಭ ಶೆಟ್ಟಿ, ರಜನಿ, ಪ್ರಿಯಾ, ದೀಪ್ತಿ, ರಾಧಿಕಾ, ರೇಣುಕಾ, ಗಾಯತ್ರಿ, ಸುಲತಾ, ಆಶಾ ಶೆಟ್ಟಿ, ಸಹನಾ, ನಿಶ್ಚಿತ ಶೆಟ್ಟಿ ಸಹಿತ ಮಹಿಳಾ ಮೋರ್ಚಾ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜಾಪುರ ಸಾರಸ್ವತ ಸೊಸೈಟಿ ಲಿ.: ನವೀಕೃತ ಹವಾನಿಯಂತ್ರಿತ ಬೆಳ್ಮಣ್ ಶಾಖೆ ಉದ್ಘಾಟನೆ

Madhyama Bimba

ಸಾಣೂರು ರಾಜೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

Madhyama Bimba

ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More