ಹೆಬ್ರಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನರೇಂದ್ರ ಮೋದಿಜಿ ಅವರು ಅಧಿಕಾರಕ್ಕೆ ಬಂದು 25 ವರ್ಷ ಪೂರ್ಣಗೊಂಡ ಪ್ರಯುಕ್ತ ಹೆಬ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಗುರುತಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹೆಬ್ರಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ನಾಯಕ್, ಹೆಬ್ರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ತಾರಾನಾಥ್ ಬಂಗೇರ. ಮಾಜಿ ಉಪಾಧ್ಯಕ್ಷರುಗಳಾದ ವೀಣಾ ಪ್ರಭು. ಗಣೇಶ್ ಕುಮಾರ್, ಸುಪ್ರಿಯಾ, ಗ್ರಾಮ ಸಮಿತಿ ಅಧ್ಯಕ್ಷರಾದ ಅರುಣ್ ಶೆಟ್ಟಿ ಕನ್ಯಾನ, ಕಾರ್ಯದರ್ಶಿ ಸುರೇಶ್ ಭಂಡಾರಿ ಉಪಸ್ಥಿತರಿದ್ದರು.
