ಕಾರ್ಕಳಹೆಬ್ರಿ

ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ (ಎಎವೈ) ಪಡಿತರ ಚೀಟಿಯಲ್ಲಿರುವ ಅರ್ಹ ಫಲಾನುಭವಿಗಳು, ಈ ಹಿಂದೆ ಇ-ಕೆವೈಸಿ ಮಾಡಿಸಿ 5 ವರ್ಷಗಳು ಪೂರ್ಣಗೊಂಡಿರುವ ಪಡಿತರ ಚೀಟಿದಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರವು ಪ್ರಸ್ತುತ ಅಕ್ಟೋಬರ್ 20 ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಿರುತ್ತದೆ.

ಈ ಹಿಂದೆ ಸೆಪ್ಟಂಬರ್ 30 ನ್ನು ಕೊನೆಯ ದಿನವಾಗಿ ನಿಗದಿಗೊಳಿಸಲಾಗಿದ್ದು, ಈ ಕುರಿತಾಗಿ ಪತ್ರಿಕೆಯ ಮೂಲಕ ಮತ್ತು ನ್ಯಾಯಬೆಲೆ ಅಂಗಡಿಯವರ ಮೂಲಕ ಪಡಿತರ ಚೀಟಿದಾರರಿಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಆದರೆ, ಈಗ ಸರ್ಕಾರದಿಂದ ಪ್ರಸ್ತುತ ಅಕ್ಟೋಬರ್ 20 ರ ವರೆಗೆ ಇ-ಕೆವೈಸಿ ಮಾಡಲು ಕಾಲಾವಕಾಶವನ್ನು ವಿಸ್ತರಿಸಲಾಗಿದ್ದು, ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಇದುವರೆಗೂ ಇ-ಕೆವೈಸಿ ಮಾಡಿಸದೇ ಇರುವ ಅರ್ಹ ಫಲಾನುಭವಿಗಳು ಕೂಡಲೇ ಸದ್ರಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿಯಿರುವ ಪಡಿತರ ಚೀಟಿದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿಯವರಿಗೆ ನೀಡಲಾಗಿದೆ. ಸದರಿ ಪಟ್ಟಿಯನ್ನು ಪರಿಶೀಲಿಸಿಕೊಂಡು, ಬಾಕಿ ಉಳಿದಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ಬೇರೆಡೆಗೆ ವಲಸೆ ಹೋಗಿರುವ ಅಥವಾ ಊರು ಬಿಟ್ಟು ತೆರಳಿರುವ ಪಡಿತರ ಚೀಟಿದಾರರು ಸಹ ತಮ್ಮ ಇ-ಕೆವೈಸಿ ಸ್ಥಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ಪರಿಶೀಲಿಸಿಕೊಂಡು ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಅಲ್ಲದೇ “ಅನ್ನಸೇವಾ” ಆಪ್ ಅನ್ನು ಮೊಬೈಲ್ ನಲ್ಲಿರುವ ಪ್ರೇಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಂಡು ಸಹ ಮನೆಯಲ್ಲಿಯೇ ಇ-ಕೆವೈಸಿಯನ್ನು ಪಡಿತರ ಚೀಟಿದಾರರು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತೆಗೆದುಕೊಂಡು ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

 

Related posts

ಮುಂಗಾರು ಬೆಳೆ ಸಮೀಕ್ಷೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Madhyama Bimba

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ- ಕಾಲೇಜಿನ 30 ವಿದ್ಯಾರ್ಥಿಗಳಿಗೆ 100ರ ಒಳಗೆ ರ್‍ಯಾಂಕ್- ನಾಗದೇವ್ ಎಂ. ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 28ನೇ ರ್‍ಯಾಂಕ್

Madhyama Bimba

ಯರ್ಲಪಾಡಿ: ಹೃದಯಾಘಾತದಿಂದ ಯುವಕ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More