ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟು ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ತಾಯಿ ಮಗ ಮೃತಪಟ್ಟ ದುರ್ಘಟನೆ ಇಂದು ನಡೆದಿದೆ. ತಾಯಿ ಮರ್ಸಿ ಮಸ್ಕರೇನಸ್ (45) ಮತ್ತು ಮಗ ಶೋನ್ ಮಸ್ಕರೇನಸ್ (18) ಮೃತಪಟ್ಟ ದುರ್ದೈವಿಗಳು. ಮಗನನ್ನು ರಕ್ಷಿಸಲು ಹೋದಾಗ ತಾಯಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೂಡುಬಿದಿರೆ ಹೋಲಿ ರೋಸರಿ ವಿದ್ಯಾರ್ಥಿಯಾಗಿದ್ದ ಶೋನ್ ಮಸ್ಕರೇನಸ್ ಬಟ್ಟೆ ಒಣಗಿಸಲು ಕಾರ್ಯನಿರತರಾಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಟ್ಟೆ ಒಣಗಿಸಲು ಹಾಕಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಪ್ರವಹಿಸಿರಬಹುದು ಎಂದು ಶಂಕಿಸಲಾಗಿದೆ.
ಘಟನೆ ಬೆಳಿಗ್ಗೆ ಸುಮಾರು 7ರಿಂದ 8 ಗಂಟೆಯ ವೇಳೆಗೆ ಬೆಳಕಿಗೆ ಬಂದಿದೆ. ತೋಟದ ಕೆಲಸಕ್ಕೆ ಬಂದ ಕಾರ್ಮಿಕರೊಬ್ಬರು ಸ್ಥಳಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
