ಕಾರ್ಕಳಹೆಬ್ರಿ

ಶಿರ್ಲಾಲು ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಪುನರ್‌ನಿರ್ಮಾಣದ ಮನವಿ ಪತ್ರ ಬಿಡುಗಡೆ

ಕಾರ್ಕಳ ಶಿರ್ಲಾಲಿನ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಪದ್ಮಾವತಿ ಅಮ್ಮನವರ ಬಸದಿಯು ಪುನರ್‌ನಿರ್ಮಾಣಗೊಳ್ಳುತ್ತಿರುವುದು ಇದರ ಮನವಿ ಪತ್ರ ಬಿಡುಗಡೆಯು ಅ.18ರಂದು ಕಾರ್ಕಳ ಜೈನ ಮಠದಲ್ಲಿ ನಡೆಯಿತು.

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮನವಿ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ ಶಿರ್ಲಾಲು ಬಸದಿಯು ಅನೇಕ ಪುರಾತನ ಬಸದಿಗಳಲ್ಲೊಂದಾಗಿದ್ದು ವಿಶಿಷ್ಠ ರೀತಿಯಲ್ಲಿ ಪುನರ್ ನಿರ್ಮಾಣಗೊಳ್ಳಬೇಕೆಂಬುದು ನಮ್ಮ ಇಚ್ಛೆಯಾಗಿದ್ದು, ಅದರಂತೆ ಕೆಲಸ ಕಾರ್ಯಗಳು ನಡೆಯುತ್ತಿದೆ. ಶ್ರೀ ಕ್ಷೇತ್ರಕ್ಕೆ ನನ್ನ ಸಹಕಾರವನ್ನು ನೀಡುತ್ತೇನೆ ಎಂದರು.

ಕಾರ್ಕಳ ಶ್ರೀ ಜೈನ ಮಠದ ಧ್ಯಾನಯೋಗಿ ಸ್ವಸ್ತಿ ಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಆಶೀವರ್ಚನ, ಮಾರ್ಗದರ್ಶನ ನೀಡಿದರು.

ಪರಮಪೂಜ್ಯ 108ಏಲಾಚಾರ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿ ಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಬಸದಿಯ ವಾಸ್ತು ವಿನ್ಯಾಸದ ಬಗ್ಗೆ ಇಂಜಿನಿಯರ್ ಭರತ್‌ರಾಜ್ ಜೈನ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಸನತ್ ಕುಮಾರ್ ಜೈನ್ ಸ್ವಾಗತಿಸಿದರು. ಯೋಗರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

Related posts

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಉದಯಕುಮಾರ್ ಹೆಗ್ಡೆ ಯರ್ಲಪಾಡಿ ನೇಮಕ

Madhyama Bimba

ಶಿವಪುರ ಬಿಲ್ಲವ ಸಂಘದಲ್ಲಿ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ

Madhyama Bimba

ದಿ. ಸಂತೋಷ್ ನಾಯ್ಕ್‌ರಿಗೆ ನುಡಿನಮನ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More