ಕಾರ್ಕಳ

ಚಕ್ರ ಎಸೆತ ಮತ್ತು ಗುಂಡು ಎಸೆತದಲ್ಲಿ ಸನ್ವಿತ್ ಪ್ರಥಮ – ವೈಯಕ್ತಿಕ ಚಾಂಪಿಯನ್ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆ ಇಲ್ಲಿ ಜರಗಿದ ೧೪ ವರ್ಷ ವಯೋಮಾನದೊಳಗಿನ ಕಾರ್ಕಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯ ಎಂಟನೇ ತರಗತಿ ವಿದ್ಯಾರ್ಥಿ ಸನ್ವಿತ್ ಚಕ್ರ ಎಸೆತ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಶಿಕ್ಷಕರು ಮಾರ್ಗದರ್ಶನ ನೀಡಿದರು.

Related posts

ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ

Madhyama Bimba

ಕಾರ್ಕಳ ತಾಲೂಕು ಗುಡಿಗಾರ ಸಮಾಜ ಸಂಘ ಕೆರ್ವಾಶೆ ವತಿಯಿಂದ ಗಿಡ ನೆಡುವ ಹಾಗೂ ಸ್ವಚ್ಛತಾ  ಕಾರ್ಯಕ್ರಮ

Madhyama Bimba

ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More