ಕಾರ್ಕಳಹೆಬ್ರಿ

ಮಹಾಲಿಂಗೇಶ್ವರ ದೇವಸ್ಥಾನ ಬೀದಿ ಬೈಲೂರು ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

ಬೈಲೂರು: ಸುಮಾರು 800 ವರ್ಷಗಳ ಪುರಾತನ ಇತಿಹಾಸವುಳ್ಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೀದಿ ಬೈಲೂರು ಇಲ್ಲಿ 2027ರ ಫೆ. 20ರಿಂದ 28ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಕಾರ್ಯಾಲಯವನ್ನು ಬೈಲೂರು ಮಾರಿಗುಡಿ ಸಮೀಪದ ಸಿದ್ಧಿ ಕಾಂಪ್ಲೆಕ್ಸ್‌ನಲ್ಲಿ ಅ. 27ರಂದು ಉದ್ಘಾಟಿಸಲಾಯಿತು.

ಕೌಡೂರು ಶ್ರೀ ಮಾರಿಯಮ್ಮ ದೇವಸ್ಥಾನ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಸುಧೀರ್ ಹೆಗ್ಡೆ ಕಾರ್ಯಾಲಯವನ್ನು ಉದ್ಘಾಟಿಸಿದರು.
ಅರ್ಚಕರಾದ ಕೌಡೂರು ನಾರಾಯಣ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ವರದರಾಜ ತಂತ್ರಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಬಾಲಾಜಿತ್ ಶೆಟ್ಟಿ, ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷರಾದ ಕರುಣಾಕರ ಹೆಗ್ಡೆ, ಕಾರ್ಯದರ್ಶಿ ಸದಾನಂದ ಸಾಲಿಯಾನ್, ಕೋಶಾಧಿಕಾರಿ ಶರತ್ ಶೆಟ್ಟಿ, ಬೈಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಬೀದಿ ಬೈಲೂರು ಇದರ ಕಾರ್ಯದರ್ಶಿ ಆನಂದ ಪೂಜಾರಿ, ಜೊತೆ ಕಾರ್ಯದರ್ಶಿ ಹರೀಶ್ ಆಚಾರ್ಯ, ಸದಸ್ಯ ಉದಯ ಶೆಟ್ಟಿ, ವಿಕ್ರಮ್ ಹೆಗ್ಡೆ ಕಣಂಜಾರು, ಉದ್ಯಮಿ ಸಂತೋಷ್ ವಾಗ್ಳೆ, ಉದ್ಯಮಿ ಚಂದ್ರಶೇಖರ ಮಾಡ, ಜಯಪ್ರಕಾಶ್ ಶೆಟ್ಟಿ ಬೈಲೂರು, ಶಶೀಂದ್ರ ಶೆಟ್ಟಿ, ತಾರಾನಾಥ ಶೆಟ್ಟಿ ಹಿರ್ಗಾನ, ಹರೀಶ್ ಶೆಟ್ಟಿ ಸನ್ನಿಧಿ, ಕೇಶವ ಪೈ, ಬೈಲೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್, ಸದಸ್ಯೆ ಅಶ್ವಿತಾ ಶೆಟ್ಟಿ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

 

Related posts

 ನಿಟ್ಟೆ ಶ್ರೀ ರಾಜ ರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ಇದರ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುನಿಲ್ ಕುಮಾರ್

Madhyama Bimba

ಜೋಡು ರಸ್ತೆ ನಿವಾಸಿ ಮಂಜು ಆತ್ಮಹತ್ಯೆ

Madhyama Bimba

ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More