ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್ ಸಭೆಯನ್ನುದ್ದೇಶಿಸಿ ಮಾತನಾಡಿ ರಾಜ್ಯ ಸರ್ಕಾರ ಪಂಚಾಯತಿಗಳಿಗೆ ಅನುದಾನ ನೀಡುವಲ್ಲಿ ವಿಫಲವಾಗಿದೆ. ಅಗತ್ಯ ಪದಾರ್ಥಗಳ ಬೆಲೆ ಏರಿಕೆ ನಡೆಸಿ ಜನ ಸಾಮಾನ್ಯರನ್ನು ಅತಂತ್ರಗೊಳಿಸಿದೆ. ಅಗತ್ಯ ಆಹಾರ ಹಾಲಿನ ಬೆಲೆಯನ್ನು ವಿಪರೀತ ಏರಿಸಿ ಬರೆ ಎಳೆದಿದೆ ಎಂದು ಹೇಳಿದರು.
ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಈಶ್ವರ ಕಟೀಲ್, ಮುಖಂಡರಾದ ರವೀಂದ್ರ ಶೆಟ್ಟಿ, ಒಬಿಸಿ ಮೋರ್ಚಾ ಅಧ್ಯಕ್ಷ ಪ್ರದೀಪ ಕುಮಾರ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮನಾಥ ಕೋಟ್ಯಾನ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
