ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಹೆಬ್ರಿ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಅಜಯ್ ಕುಮಾರ್ ಮತ್ತು ಭುವನ್ ಪ್ರಸಾದ್ ಇವರು, ಸ್ವಯಂಚಾಲಿತ ಅಡಿಕೆ ಕೊಯ್ಯುವ ಯಂತ್ರದ ಮಾದರಿಯನ್ನು ಸಿದ್ಧಪಡಿಸಿ, ದ್ವಿತೀಯಾ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.


