ಬೈಲೂರು ನಚಿಕೇತ ವಿದ್ಯಾಲಯದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ನ. 03ರಂದು ನಡೆಯಿತು.


ಈ ಕಾರ್ಯಕ್ರಮದಲ್ಲಿ ಬ್ರಿಗೇಡ್ನ ಕ್ಯಾಪ್ಟನ್ ಮನಿಷಾ ಕಾಮತ್ ಹಾಗೂ ಅವರ ತಂಡದವರು ಭಾಗವಹಿಸಿ ಮಕ್ಕಳಿಗೆ ಸ್ವಚ್ಛತೆಯ ಮಹತ್ವ, ನೀರಿನ ಮಿತಬಳಕೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.



ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ನೀರನ್ನು ವ್ಯರ್ಥ ಮಾಡದೆ ಬಳಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರು.
