ಹೆಬ್ರಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಕುಕ್ಕುಜೆ ಮೂಡಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಶಿಕ್ಷಕರಾದ ಡಿ. ಲಕ್ಷ್ಮಣ ಅವರು ಮಾತನಾಡಿ, ಕನ್ನಡ ಭಾಷೆ, ನಾಡು ಮತ್ತು ಸಂಸ್ಕೃತಿಯ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗಾಗಿ ಸ್ವತಃ ಕನ್ನಡ ನಾಡಗೀತೆಯನ್ನು ಹಾಡಿ ಮಕ್ಕಳಲ್ಲಿ ಕನ್ನಡಾಭಿಮಾನ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಕೆಪಿಎ ಕಾರ್ಕಳ ವಲಯದ ಅಧ್ಯಕ್ಷ ಮುನಿಯಾಲು ಪ್ರಮೋದಚಂದ್ರ ಪೈ ವಹಿಸಿದ್ದರು.

ಲಯನ್ಸ್ ಕ್ಲಬ್ ಮುನಿಯಾಲು ಅಧ್ಯಕ್ಷರಾದ ಎಸ್‌ಕೆಪಿಎ ಉಡುಪಿ ವಲಯದ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ದೊಂಡೆರಂಗಡಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಎಸ್‌ಕೆಪಿಎ ಕಾರ್ಕಳ ವಲಯದ ಪ್ರಧಾನ ಕಾರ್ಯದರ್ಶಿ ಶೇಖರ್ ಕುಕ್ಕುಜೆ ಮತ್ತು ಎಸ್‌ಕೆಪಿಎ ಕಾರ್ಕಳ ವಲಯದ ಕೋಶಾಧಿಕಾರಿ ವಿ.ಆರ್. ಸತೀಶ್ ಆಚಾರ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಲಯದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ನು, ಪುಸ್ತಕಗಳನ್ನು ವಿತರಿಸುವುದರ ಜೊತೆಗೆ ಫಲಹಾರವನ್ನು ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ನಿರೂಪಿಸಿದರು. ಅಂಗನವಾಡಿ ಶಿಕ್ಷಕಿ ಭಾರತಿ ವಂದಿಸಿದರು.
