ಕಾರ್ಕಳ

ಕ್ರೈಸ್ಟ್‌ಕಿಂಗ್: ಸಂಭ್ರಮದ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.


ತೆಳ್ಳಾರು ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು, ಸಾಹಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಉಪಾಧ್ಯಕ್ಷೆಯಾದ ಶ್ರೀಮತಿ ಸಾವಿತ್ರಿ ಮನೋಹರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಮಕ್ಕಳು ತಮ್ಮ ಮನೆ ಮತ್ತು ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡಾಗ ದೇಶ ಸ್ವಚ್ಚವಾಗುತ್ತದೆ. ದೇಶದ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದೇ ಸಾರ್ಥಕ ಗಾಂಧಿ ಜಯಂತಿ ಆಚರಣೆ. ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು, ತಿದ್ದಿ ಮುನ್ನಡೆದಾಗ ಗಾಂಧಿಯಾಗಲು ಸಾಧ್ಯ. ಅದೇ ರೀತಿ ಸರಳ ಜೀವನ ಜೀವನ ಸಾಗಿಸಿದ ಲಾಲ್‌ಬಹದ್ದೂರ್ ಶಾಸ್ತ್ರಿಯವರ ಬದುಕು ನಮಗೆ ಆದರ್ಶ. ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ “ಜಯಂತಿಗಳನ್ನು ಆಚರಿಸುವ ಉದ್ದೇಶ ಮಹಾ ವ್ಯಕ್ತಿಗಳ ಶ್ರೇಷ್ಟ ಗುಣಗಳು ಹಾಗೂ ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದಾಗಿದೆ. ಗಾಂಧೀಜಿ ಅವರ ಆದರ್ಶಗಳನ್ನು ಇಡೀ ಜಗತ್ತೇ ತನ್ನಲ್ಲಿ ಅಳವಡಿಸಿಕೊಂಡಿದೆ. ಸ್ವಚ್ಚ ಪರಿಸರದ ಜೊತೆಗೆ ಸ್ವಚ್ಚ ಮನಸ್ಸು ಕೂಡಾ ನಮ್ಮದಾಗಬೇಕು. ಸ್ವಚ್ಚ ಮನಸ್ಸಿನಿಂದ ಸ್ವಚ್ಚ ದೇಶ ನಿರ್ಮಾಣವಾಗುತ್ತದೆ” ಎಂದು ಹೇಳಿದರು.


ಶಿಕ್ಷಕ-ರಕ್ಷಕ ಸಂಘದ ಪ್ರೌಢಶಾಲಾ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ಡಿ’ಸೋಜ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಸರ್ವಧರ್ಮ ಪ್ರಾರ್ಥನೆ ನಡೆಯಿತು.


ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಸಮಾಲೋಚಕಿ ಸಿ.ಡಾ.ಶಾರ್ಲೆಟ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ರಾಜೇಶ್ ಕುಂದರ್, ಪ್ರಾಥಮಿಕ ವಿಭಾಗದ ಲಿನೆಟ್ ಮರಿನಾ ಡಿ’ಸೋಜ ಮುಂತಾಧವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಇದಕ್ಕೂ ಮೊದಲು ಸಂಸ್ಥೆಯ ಸ್ಕೌಟ್ ಮತ್ತು ಗೈಡ್ಸ್, ರೋವರ್‍ಸ್ ಮತ್ತು ರೇಂಜರ್‍ಸ್ ಘಟಕದವರು ಹಾಗೂ ವಿದ್ಯಾರ್ಥಿಗಳು ಸ್ವಚ್ಚ ಭಾರತದ ಅಂಗವಾಗಿ ಕಾಲೇಜು ಪರಿಸರ, ಗಾಂಧಿ ಮೈದಾನ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳ ಸ್ವಚ್ಚತಾ ಕಾರ್ಯ ಕೈಗೊಂಡರು. ಶಿಕ್ಷಕಿ ಶ್ರೀಮತಿ ರೂಪಾಲಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.

Related posts

ಗಮನ ಸೆಳೆಯಿತು ಗ್ಯಾರಂಟಿ ಅಧ್ಯಕ್ಷರ ದಾನ ಕಾರ್ಯ

Madhyama Bimba

ಫೆ. 12-16: ಹಿರ್ಗಾನ, ಚಿಕ್ಕಲ್‌ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಗೌಣೋತ್ಸವ

Madhyama Bimba

ಕಾರ್ಕಳ ಪುರಸಭೆಗೆ ನಾಲ್ವರ ನಾಮನಿರ್ದೇಶನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More