ಕಾರ್ಕಳಹೆಬ್ರಿ

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.


ಸಂಸ್ಥೆಯ ಮುಖ್ಯಸ್ಥರು ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ವಿದ್ಯಾರ್ಥಿಗಳಾದ ಸೃಷ್ಟಿ ಕೆ ಪೂಜಾರಿ, ಸೃಷ್ಟಿ ಎಚ್‌ಎಸ್, ಸಿಂಚನ ದೇವಾಡಿಗ, ಅನ್ನಪೂರ್ಣ ಅವರು ಗಾಂಧಿ ಹಾಗೂ ಶಾಸ್ತ್ರೀಯವರ ಜೀವನ ಗಾಥೆಯ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಅಮರೇಶ ಹೆಗ್ಡೆ, ಸಿಬಿಎಸ್‌ಸಿ ವಿಭಾಗದ ಪ್ರಾಂಶುಪಾಲ ಅರುಣ್ ಹೆಚ್ ವೈ, ಮುಖ್ಯ ಶಿಕ್ಷಕರಾದ ಅನಿತಾ, ಅಪರ್ಣಾ ಆಚಾರ್, ಶಕುಂತಲಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ ಸುಹಾಸ್ ನಿರೂಪಿಸಿ ವಂದಿಸಿದರು.

Related posts

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲಾ ಪ್ರಾರಂಭೋತ್ಸವ

Madhyama Bimba

ಕ್ರೈಸ್ಟ್‌ಕಿಂಗ್: ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಗಣ್ಯ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Madhyama Bimba

ಕೆರೆಬೆಟ್ಟು ಶಾಲೆಯಲ್ಲಿ ನೋಟ್ಸ್ ಪುಸ್ತಕ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More