ಕಾರ್ಕಳ

ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಕಾರ್ಕಳ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಕಾನೂನು ಮಾಹಿತಿ ನೀಡುತ್ತಾ ಮಾತನಾಡಿದ ಅವರು “ಹದಿಹರೆಯದ ವಯಸ್ಸಿನಲ್ಲಿ ದೈಹಿಕ ಆಕರ್ಷಣೆ, ಮಾದಕ ವಸ್ತುಗಳು, ಸಾಮಾಜಿಕ ಜಾಲತಾಣಗಳು, ಮೊಬೈಲ್ ಗೇಮ್‌ಗಳು ಇತ್ಯಾದಿಗಳ ಬಗ್ಗೆ ಆಕರ್ಷಣೆ ಹೆಚ್ಚಾಗಿರುತ್ತದೆ. ಅವುಗಳಿಗೆ ಬಲಿ ಬಿದ್ದರೆ ಜೀವನ ಹಾಳಾಗುತ್ತದೆ. ಈಗ ಸೈಬರ್ ವಂಚನೆಗೆ ಒಳಗಾಗುತ್ತಿರುವವರು ವಿದ್ಯಾವಂತರೇ ಆಗಿದ್ದಾರೆ. ಸಮಾಜಘಾತಕ ಶಕ್ತಿಗಳು ಹಾಗೂ ಸ್ವಾರ್ಥಿಗಳು ಯುವಜನರನ್ನು ದುರುಪಯೋಗಪಡಿಸಿಕೊಂಡು ತಮ್ಮ ಕೆಲಸ ಸಾಧಿಸಿ ಯುವಜನರ ಜೀವನ ನಾಶ ಮಾಡುತ್ತಾರೆ, ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು. ನಮ್ಮ ವಿದ್ಯೆ ನಮ್ಮ ವೈಯಕ್ತಿಕ ಉದ್ಧಾರ ಹಾಗೂ ಸಮಾಜದ ಉದ್ಧಾರಕ್ಕೆ ಬಳಕೆಯಾಗಬೇಕೇ ಹೊರತು ಹೊಡೆದಾಟ, ಸಮಾಜ ವಿರೋಧಿ ಕೃತ್ಯಗಳಿಗೆ ಬಳಕೆಯಾಗಬಾರದು” ಎಂದು ಹೇಳಿದರು. ನಗರ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಸಿಬ್ಬಂದಿ ಸಂತೋಷ್ ಕುಮಾರ್ ಮಾತನಾಡಿ “ಮಕ್ಕಳು ತಮ್ಮ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು, ಸಾಮಾಜಿಕ ಮಾಧ್ಯಮಗಳಲ್ಲಿ ಗುರುತು ಪರಿಚಯ ಇಲ್ಲದವರ ಜೊತೆ ಸಂಪರ್ಕ ಇಟ್ಟುಕೊಳ್ಳಬಾರದು. ಮೊಬೈಲ್‌ಗಳನ್ನು ಬಳಸುವಾಗ ಯೋಚನೆ ಮಾಡಿ ಎಷ್ಷು ಬೇಕೋ ಅಷ್ಟು ಮಾತ್ರ ಎಚ್ಚರಿಕೆಯಿಂದ ಬಳಕೆ ಮಾಡಬೇಕು. ಆನ್ಲೈನ್ ಗೇಮ್‌ಗಳಿಂದ ದೂರ ಇರಬೇಕು. ಯಾವುದೇ ರೀತಿಯ ತೊಂದರೆಗಳಾದಲ್ಲಿ ಶಿಕ್ಷಕರಿಗೆ, ಪೋಷಕರಿಗೆ ಅಥವಾ ಪೊಲೀಸರಿಗೆ ತಿಳಿಸಬೇಕು” ಎಂದು ಹೇಳಿದರು.


ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಅವರು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂದರ್ಭೋಚಿತವಾಗಿ ಮಾತನಾಡಿದರು.


ಸಂಸ್ಥೆಯ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಅವರು ವೇದಿಕಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.

Related posts

ಅಂತರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ  ಮಿಂಚಿದ ಹಿರ್ಗಾನದ ಅದಿತಿ ಶರ್ಮಾ ಹಾಗೂ ರತಿ ಶರ್ಮಾ

Madhyama Bimba

ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ ಮತ್ತು ಜಲಮರುಪೂರಣ ವಸ್ತುಪ್ರದರ್ಶನ

Madhyama Bimba

ಡಾ| ಅರುಣ್ ಉಳ್ಳಾಲ್ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ: ರಮಿತಾ ಶೈಲೇಂದ್ರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More