ಕಾರ್ಕಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಸೂರಾಲು ಇದರ ಆಶ್ರಯದಲ್ಲಿ ಮಿಯ್ಶಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸೂರಾಲು ವ್ಯಾಪ್ತಿಯ ಭಕ್ತಾದಿಗಳಿಂದ ಭಜನಾ ಸಂಕೀರ್ತನೆಯೊಂದಿಗೆ ಭಕ್ತಿಯ ನಡಿಗೆ ದೇವಸ್ಥಾನದ ಕಡೆಗೆ ಕಾರ್ಯಕ್ರಮವು ಅ.3ರಂದು ನಡೆಯಿತು.
ಶ್ರೀ ಮಹಾಲಿಂಗೇಶ್ವರ ದೇವರ ಪೂಜಾಮೂರ್ತಿಗೆ ದೇವಸ್ಥಾನದ ಅರ್ಚಕರಾದ ಹರಿದಾಸ್ ಭಟ್ ಅವರು ಮಂಗಳಾರತಿ ನೆರವೇರಿಸಿದರು.
ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ಅವರು ಶ್ರೀ ವ್ಯಾಘ್ರ ಚಾಮುಂಡಿ ದೈವದ ಕಟ್ಟೆಯ ಬಳಿ ಪ್ರಾರ್ಥನೆ ಸಲ್ಲಿಸಿ, ಕುಣಿತ ಭಜನೆ ಮತ್ತು ದೇವರ ಭಜನಾ ಸಂಕೀರ್ತನೆ ಯೊಂದಿಗೆ ಸೂರಾಲು ಗುಂಡಾಜೆ ಶಾಲಾ ವಠಾರದಿಂದ ಭಕ್ತಿಯ ನಡಿಗೆಯನ್ನು ಆರಂಭಿಸಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವಸ್ಥಾನದಲ್ಲಿ ಪ್ರಧಾನ ತಂತ್ರಿಗಳಾದ ಸರ್ವೇಶ್ ತಂತ್ರಿಯವರ ನೇತೃತ್ವದಲ್ಲಿ ನಡೆಯುವ ದುರ್ಗಾ ನಮಸ್ಕಾರ ಪೂಜೆ ಮತ್ತು ದೇವರ ಮಹಾಪೂಜೆಯಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದ ಸ್ವೀಕರಿಸಿದರು.
ನಂತರ ದೇವಸ್ಥಾನದ ವತಿಯಿಂದ ಅನ್ನಸಂತರ್ಪಣೆ ನಡೆಯಿತು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಬೋರ್ಕಟ್ಟೆ ಗಣಪತಿ ಹೆಗ್ಡೆಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ, ಸತ್ಯೇಂದ್ರ ನಾಯಕ್, ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸುಧಾಕರ್ ಎಂ ಶೆಟ್ಟಿ, ಜಯಪ್ರಕಾಶ್ ದೇವಾಡಿಗ, ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಕುಲಾಲ್, ಪ್ರಮುಖರಾದ ಮಂಜುನಾಥ್ ನಾಯಕ್, ಸುಕೀರ್ತಿ ಶೆಟ್ಟಿ, ಗಿರೀಶ್ ಅಮೀನ್, ಕಿಶೋರ್ ಶೆಟ್ಟಿ, ಮಾಧವ ಕಾಮತ್, ಗಿರೀಶ್ ಪೈ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಮಂಜುನಾಥ್ ಕೋಟ್ಯಾನ್ ಅವರು ಈ ಧಾರ್ಮಿಕ ಪುಣ್ಯ ಕಾರ್ಯಕ್ರಮ ಸಂಯೋಜಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.