ಮೂಡುಬಿದಿರೆ

ಮೂಡುಬಿದಿರೆ: ಅಮೃತ ಸಭಾಭವನ ಉದ್ಘಾಟನೆ

ಸಮಾಜದಲ್ಲಿ ಅಸಮಾನತೆ ಎಂಬುದು ನಿರಂತರವಾಗಿದೆ. ವಿದ್ಯೆ ಮತ್ತು ಸಂಘಟನೆಯಿಂದ ಮಾತ್ರ ಇದನ್ನು ನಿವಾರಿಸಲು ಸಾಧ್ಯ ಎಂಬುದನ್ನು ಅರಿತ ನಾರಾಯಣ ಗುರುಗಳು ಈ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದರು. ಗುರುಗಳ ತತ್ವದಲ್ಲಿ ಮನುಷ್ಯತ್ವ ಇದೆ ಎಂದು ಉಚ್ಛ ನ್ಯಾಯಾಲಯದ ನಿರ್ದೇಶಿತ ಹಿರಿಯ ವಕೀಲ ಐ.ತಾರಾನಾಥ ಪೂಜಾರಿ ಹೇಳಿದರು.


ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ನಿರ್ಮಿಸಲ್ಪಟ್ಟ ಹವಾನಿಯಂತ್ರಿತ ಅಮೃತ ಸಭಾಭವನವನ್ನು ಲೋಕಾರ್ಪಣೆಗೊಳಿಸಿ ನಂತರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ನಾರಾಯಣ ಗುರುಗಳ ಸಮಾನತೆಯ ತತ್ವವೇ ಸಂವಿಧಾನದಲ್ಲಿಯೂ ಅಡಕವಾಗಿದೆ. ಅವರ ವೈಚಾರಿಕ ನಿಲುವು, ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದ ಅವರು ಇಂದು ಗಳಿಸಿದ ಸಂಪಾದನೆಯಲ್ಲಿ ಶೇ.೪೦ರಷ್ಟನ್ನು ಮೂಢನಂಬಿಕೆಗಳಿಗೆ ಬಳಸುತ್ತಿರುವುದು ಆತಂಕಕಾರಿಯಾಗಿದೆ. ಮೂಢನಂಬಿಕೆಗಳಿಗೆ ಬಳಸುವ ಹಣವನ್ನು ವಿದ್ಯೆಗೆ ಬಳಸಿ ಎಂದು ಸಲಹೆ ನೀಡಿದರು.


ಸಂಘದ ಅಧ್ಯಕ್ಷ ಸುರೇಶ್ ಕೆ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕ ಪ್ರಕಾಶ್ ಮಲ್ಪೆ ದಿಕ್ಸೂಚಿ ಭಾಷಣ ಮಾಡಿದರು.
ಸಂಘದ ಲೋಗೋವನ್ನು ಬಿಡುಗಡೆಗೊಳಿಸಲಾಯಿತು. ರಚನೆ ಮಾಡಿದ ರವಿ ಮೂಡುಕೊಣಾಜೆ ಅವರನ್ನು ಗೌರವಿಸಲಾಯಿತು.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಭಾಸ್ಕರ್ ಎಸ್.ಕೋಟ್ಯಾನ್, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಸುವರ್ಣ ಪ್ರತಿಷ್ಠಾನ ಕರ್ನಿರೆ ಅಧ್ಯಕ್ಷ ಪ್ರಭಾಕರ ಡಿ.ಸುವರ್ಣ, ಬಿಜೆಪಿಯ ಜಿಲ್ಲಾ ಮುಖಂಡ ಸುದರ್ಶನ ಎಂ., ಉದ್ಯಮಿ ನಾರಾಯಣ ಪಿ.ಎಂ, ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ವಾರ್ಡ್ ಸದಸ್ಯ ರಾಜೇಶ್ ನಾಯ್ಕ್ ಅತಿಥಿಗಳಾಗಿದ್ದರು.
ಕೋಶಾಧಿಕಾರಿ ಜಗದೀಶ್ ಪೂಜಾರಿ ಮಿಜಾರು, ಉಪಾಧ್ಯಕ್ಷ ರವೀಂದ್ರ ಕರ್ಕೇರಾ, ಶ್ರೀ ನಾರಾಯಣಗುರು ಸೇವಾದಳದ ಅಧ್ಯಕ್ಷ ದಿನೇಶ್ ಪೂಜಾರಿ ಮಾರೂರು, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ದಿನೇಶ್ ಮತ್ತಿತರರಿದ್ದರು.

ಪ್ರಧಾನ ಕಾರ್ಯದರ್ಶಿ ಗಿರೀಶ್ ಕುಮಾರ್ ಹಂಡೇಲು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಹನ್ ಅತಿಕಾರಬೆಟ್ಟು, ಶ್ರೀರಾಜ್ ಸನಿಲ್, ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸುಶಾಂತ್ ಕರ್ಕೇರಾ ವಂದಿಸಿದರು.

Related posts

ಪಾಡ್ಯಾರು ಬೈಲು  ರಸ್ತೆಯಲ್ಲಿ ಗುಂಡಿ, ಮೋರಿ ಕುಸಿತ

Madhyama Bimba

ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಅವಹೇಳನಕಾರಿ ಹೇಳಿಕೆ- ಹಿಂಜಾವೇ ಮೂಡುಬಿದಿರೆ ಪೊಲೀಸ್ ಗೆ ದೂರು

Madhyama Bimba

ಮಾಧವ ಭಂಡಾರಿ ಇನ್ನಿಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More