ಕಾರ್ಕಳ

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲು ಕಾರ್ಕಳ ಕೋರ್ಟ್‌ನ ಜಡ್ಜ್ ಆಗಿರುವ ಶ್ರೀಮತಿ ಶರ್ಮಿಳಾ ರವರು ಮಕ್ಕಳಿಗೆ ಆಗುವ ತೊಂದರೆಗಳ ಮತ್ತು ದೌರ್ಜನ್ಯಗಳ ಬಗ್ಗೆ ಮಾಹಿತಿಯನ್ನು ನೀಡಿ ಅದಕ್ಕೆ ಕಾನೂನು ಹೇಗೆ ಸಹಾಯ ಮಾಡುತ್ತದೆ ಎಂದು ತಿಳಿಸಿ ಹೇಳಿದರು.


ಹಾಗೂ ಕಾರ್ಕಳದ ವಕೀಲರ ಸಂಘದ ಉಪಾಧ್ಯಕ್ಷರಾದ ಹರೀಶ್ ಅಥಿಕಾರಿಯವರಿಂದ ವಿದ್ಯಾರ್ಥಿಗಳಿಗೆ ಪೋಸ್ಕೋ ಆಕ್ಟ್ ಬಗ್ಗೆ ಕಾನೂನು ಮಾಹಿತಿಯನ್ನು ತಿಳಿಸಿ, ಎಲ್ಲಾ ವಿದ್ಯಾರ್ಥಿಗಳು ಈ ಬಗ್ಗೆ ಅರಿತುಕೊಳ್ಳಬೇಕು. ಯಾವುದೇ ಸಮಸ್ಯೆಗಳನ್ನು ಎದುರಿಸುವ ಶಕ್ತಿ ನಿಮ್ಮಲ್ಲಿ ಇರಬೇಕು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಅವರು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುರೇಖಾ ರಾಜ್ ರವರು ಉಪಸ್ಥಿತರಿದ್ದರು.

Related posts

ಪುರಸಭೆ ವ್ಯಾಪ್ತಿಯಲ್ಲಿ ಅಸಮರ್ಪಕ ಕಸ ವಿಲೇವಾರಿ ತಕ್ಷಣ ಕ್ರಮಕ್ಕೆ ಆಗ್ರಹ : ಶಾಸಕರ ಮೌನಕ್ಕೆ‌ ಆಕ್ರೋಶ ನಮ್ಮೂರಿಗೂ ಒಬ್ಬ ಜನಪರ ಕಾಳಜಿಯ ಶಾಸಕ ಬೇಕಿತ್ತು- ಶುಭದರಾವ್

Madhyama Bimba

ಕಾರ್ಕಳ: ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಹಲ್ಲೆ- ಕೇಸು ದಾಖಲು

Madhyama Bimba

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More