ಕಾರ್ಕಳಹೆಬ್ರಿ

ಮಣಿಪಾಲ ಜ್ಞಾನಸುಧಾ: ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವಿಭಾಗದ ವತಿಯಿಂದ ನಡೆಯುವ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆಯು ಅಕ್ಟೋಬರ್ 9 ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಅವರು ಮಾತನಾಡಿ ವಿದ್ಯಾರ್ಥಿಗಳ ಕ್ರೀಡಾ ಬೆಳವಣಿಗೆಯಲ್ಲಿ ಇಲಾಖೆಯು ಮುತುವರ್ಜಿಯಿಂದ ಕಾರ್ಯ ನಿರ್ವಹಿಸುತ್ತಿದೆ, ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಸಲು ಎಲ್ಲಾ ಪ್ರಾಂಶುಪಾಲರುಗಳು, ದೈಹಿಕ ಶಿಕ್ಷಣ ಉಪನ್ಯಾಸಕರು ಕೈಜೋಡಿಸಬೇಕು ಎಂದರು.


ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಮ್. ಕೊಡವೂರು ಮಾತನಾಡಿ, ಈ ಬಾರಿಯ ಜಿಲ್ಲಾ ಮಟ್ಟದ ಕ್ರೀಡಾಕೂಟದ ಜವಾಬ್ದಾರಿಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರ ಸಂಘವು ವಹಿಸಿಕೊಳ್ಳಲಿದೆ ಎಂದರು. ಈ ಬಾರಿಯ ಜಿಲ್ಲಾ ಮಟ್ಟದ ಕ್ರೀಡಾಕೂಟವು ಅಕ್ಟೋಬರ್ ತಿಂಗಳ 29 ಮತ್ತು 30ರಂದು ಉಡುಪಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡಿನಲ್ಲಿ ನಡೆಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾ ಕ್ರೀಡಾ ಸಂಯೋಜನಾಧಿಕಾರಿಯಾದ ದಿನೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ವರ್ಗೀಸ್, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ,ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್‌ಕುಮಾರ್ ಶೆಟ್ಟಿ, ಅಧ್ಯಕ್ಷರಾದ ಸತೀಶ್ ಹೆಗ್ಡೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕ್ರೀಡಾ ಕಾರ್ಯದರ್ಶಿಗಳಾದ ಐವನ್ ದೊನಾತ್ ಡಿಸೋಜ, ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಸರ್ವಸದಸ್ಯರು ಉಪಸ್ಥಿತರಿದ್ದರು.

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್ ವಂದಿಸಿದರು.

Related posts

ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಇದರ ಅಧ್ಯಕ್ಷರಾಗಿ ಸುನೀತ ಹೆಬ್ಬಾರ್ ಆಯ್ಕೆ

Madhyama Bimba

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಕಾರ್ಕಳ: ಕುಸಿದು ಬಿದ್ದು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More