ಕಾರ್ಕಳ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :ರಜತ ವರ್ಷದ ಲಾಂಛನ ಬಿಡುಗಡೆ

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಸ್ಥೆಯು ಯಶಸ್ವಿಯಾಗಿ 25ನೇ ವರ್ಷಕ್ಕೆ ಪಾದಾರ್ಪಣೆಯಾದ ನಿಟ್ಟಿನಲ್ಲಿ ರಜತ ವರ್ಷಾಚರಣೆಗೆ ಚಾಲನೆ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಅವರು ರಜತ ವರ್ಷದ ಲಾಂಛನ ಬಿಡುಗಡೆ ಮಾಡಿ ಶುಭ ಹಾರೈಸಿದರು.


ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರು ಮತ್ತು ಯಕ್ಷರಂಗದ ಚಾರ್ಲಿ ಚಾಪ್ಲಿನ್ ಖ್ಯಾತಿಯ ಸೀತಾರಾಮ್ ಕುಮಾರ್ ಕಟೀಲು ಅವರು ರಜತ ವರ್ಷಾಚರಣೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಭಾರತೀಯ ಜೇಸಿಐನ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಕೆ. ಅವರು ದಿಕ್ಸೂಚಿ ಭಾಷಣ ಮಾಡಿದರು.

ಮಂಗಳೂರು ಕೇಂದ್ರ ಸಮಿತಿ ಕರಾವಳಿ ಭಜನಾ ಸಂಸ್ಕಾರ ವೇದಿಕೆಯ ಪ್ರಧಾನ ಕಾರ್ಯದರ್ಶಿಗಳಾದ ಎರ್ಲಪಾಡಿ ಶ್ರೀನಿವಾಸ ಪೂಜಾರಿ ಅವರು ಸಂಘದ ಹಾಡು ಬಿಡುಗಡೆ ಮಾಡಿದರು.

ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ಜಯಂತಿ ಆರ್. ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಪ್ರಥ್ವಿರಾಜ್ ಬಲ್ಲಾಳ್ ಅವರನ್ನು ಸನ್ಮಾನಿಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಿದರು, ಸಂಘದ ಸದಸ್ಯರಾದ ಪದ್ಮಶ್ರೀ ಪೂಜಾರಿ, ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್ ಅವರು ಪ್ರಾರ್ಥನೆಗೈದರು, ನಿಕಟ ಪೂರ್ವ ಕಾರ್ಯದರ್ಶಿ ವೀಣಾ ಪೂಜಾರಿ ಸ್ವಾಗತಿಸಿದರು, ನಿಕಟ ಪೂರ್ವಾಧ್ಯಕ್ಷ ಪ್ರಶಾಂತ್ ಪೂಜಾರಿ ಸನ್ಮಾನಿತರ ಪರಿಚಯ ವಾಚಿಸಿದರು, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ ಸಾಧಕ ವಿದ್ಯಾರ್ಥಿಗಳ ಪರಿಚಯ ವಾಚಿಸಿದರು, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.

 

Related posts

ಕ್ರೈಸ್ಟ್‌ಕಿಂಗ್: ಸಂಭ್ರಮದ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

Madhyama Bimba

ಪ.ಜಾತಿ/ ಪಂಗಡದ ಜನಾಂಗದವರಿಂದ ಅಹವಾಲು ಸಲ್ಲಿಕೆಗೆ ಅವಕಾಶ

Madhyama Bimba

ಕಾರ್ಕಳ: ಮನೆಯಲ್ಲಿದ್ದ 49 ಸಜೀವ ಮದ್ದುಗುಂಡುಗಳ ಕಳ್ಳತನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More