ಅಕ್ಟೋಬರ್ 11: 5ನೇ ಮುದ್ರಾಡಿ ಶಾರದೋತ್ಸವ.
ಹೆಬ್ರಿ : ಮುದ್ರಾಡಿ ಶ್ರೀ ಶಾರದೋತ್ಸವ ಸಮಿತಿಯ ವತಿಯಿಂದ ಶ್ರೀ ಗುರುರಕ್ಷಾ ಸೌಹಾರ್ದ ಸಹಕಾರಿಯ ಆವರಣದಲ್ಲಿ 5ನೇ ವರ್ಷದ ಮುದ್ರಾಡಿ ಶಾರದೋತ್ಸವವು ವೈಭವದಿಂದ ನಡೆಯಲಿದೆ. ಬೆಳಿಗ್ಗೆ ಶ್ರೀ ಶಾರದಾ ಮಾತೆಯ ಮೂರ್ತಿಯ ಪ್ರತಿಷ್ಠಾಪನೆ ನಡೆದು ಬಳಿಕ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ವಿವಿಧ ಕ್ಷೇತ್ರಗಳ ಸಾಧಕರಿಗೆ ಮುದ್ರಾಡಿ ಶಾರದೋತ್ಸವ ಪುರಸ್ಕಾರ – 24 ಪ್ರಧಾನ ನಡೆಯಲಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಮುದ್ರಾಡಿ ಶಾರದೋತ್ಸವದ ಧಾರ್ಮಿಕ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅಧ್ಯಕ್ಷತೆ ವಹಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡುವರು. ವಿವಿಧ ಗಣ್ಯರು ಭಾಗವಹಿಸುವರು ಎಂದು ಸಮಿತಿಯ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿ ತಿಳಿಸಿದ್ದಾರೆ.