ರಾಷ್ಟ್ರೀಯ ಸೇವಾ ಯೋಜನೆ ಜೈನ ಪದವಿಪೂರ್ವ ಕಾಲೇಜು ಇದರ ವಾರ್ಷಿಕ ವಿಶೇಷ ಶಿಬಿರ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್, ಕೆಸರ್ ಗದ್ದೆ ಇಲ್ಲಿ ಪ್ರಾರಂಭಗೊಂಡಿತು.
ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ, ಕಾರ್ಯನಿರ್ವಾಹಣಾಧಿಕಾರಿ ರಾಘವೇಂದ್ರ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳಿಗೆ ನೆಲ – ಜಲ ಸಂರಕ್ಷಣೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಜೈನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ! ಪ್ರಭಾತ್ ಬಲ್ನಾಡ್ ವಹಿಸಿದ್ದರು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಡಾ| ದಯಾನಂದ ನಾಯ್ಕ್, ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಆಗಿ ಕಾರ್ಯನಿರ್ವಹಿಸುತ್ತಿದ್ದು ಶಿಬಿರಾರ್ಥಿಗಳಿಗೆ ಶಿಬಿರದ ಮಹತ್ವ ಮತ್ತು ಸೇವೆಯ ಬಗ್ಗೆ ಮಾಹಿತಿಗಳನ್ನು ನೀಡಿದರು.
ವೇದಿಕೆಯಲ್ಲಿ ಅತಿಥಿ ಗಣ್ಯರಾಗಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಭಾಸ್ಕರ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರವೀಣ್ ಜೈನ್, ಬೆಳುವಾಯಿ ಪ್ರಗತಿಪರ ಕೃಷಿಕರಾದ ಡಾ| ನಾಗರಾಜ್ ಶೆಟ್ಟಿ, , ಮುಖ್ಯೋಪಾಧ್ಯಯರಾದ ಶ್ರೀಮತಿ ರಾಜಶ್ರೀ ನಾಯಕ್, ಜೈನ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಮಧುಕರ್ ಸಾಲಿನ್ಸ್ ಇವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಹಿತನುಡಿಗಳನ್ನು ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ಶ್ರೀಮತಿ ವಾಣಿ ಎಂ. ಸ್ವಾಗತಿಸಿದರು . ಸಹ ಸಂಯೋಜನಾಧಿಕಾರಿಗಳಾದ ಶ್ರೀಮತಿ ವನಿತಾ ಆರ್. ಕೆಂಬಾರೆ ಮತ್ತು ಆಕರ್ಷ್ ಕುಮಾರ್ ಜೈನ್, ಕಾಲೇಜಿನ ಕಛೇರಿ ಮೇಲ್ವಿಚಾರಕರಾದ ಜಯಪ್ರಭ ಹಾಗೂ ಘಟಕದ ನಾಯಕಿಯಾದ ಕುಮಾರಿ ರಾಧಿಕಾ ಇವರು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ನಾಯಕನಾದ ಮಾ| ಚೇತನ್ ವಂದಿಸಿದರು. ಶಿಬಿರಾರ್ಥಿಯಾದ ಕುಮಾರಿ ನಿತೀಕ್ಷಾ ಕಾರ್ಯಕ್ರಮ ನಿರೂಪಣೆಗೈದರು.