ಮೂಡುಬಿದಿರೆ

ಬಿಜೆಪಿ ಅಭ್ಯರ್ಥಿ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತಯಾಚನೆ

ಮೂಡುಬಿದಿರೆ ತಾಲೂಕಿನ ಪಾಲಡ್ಕ, ಪುತ್ತಿಗೆ, ಬೆಳುವಾಯಿ, ಪಡುಮಾರ್ನಾಡು, ಶಿರ್ತಾಡಿ, ದರೆಗುಡ್ಡೆ, ವಾಲ್ಪಾಡಿ, ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಧಾನಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಚುನಾವಣಾ ಪ್ರಚಾರ ನಡೆಸಿದರು. ಪಂಚಾಯತ್ ಸದಸ್ಯರನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿಯನ್ನು ವಿಜಯಿಯಾಗಿಸುವಂತೆ ವಿನಂತಿಸಿದರು.


ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ತೋಡಾರು ,ಸೇರಿದಂತೆ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರು, ಪಕ್ಷದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

Related posts

ನೀಟ್ ಫಲಿತಾಂಶದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

Madhyama Bimba

ಮೂಡಬಿದ್ರೆಯ ರೋಟರಿ ಶಾಲೆಯ ಸಂಸತ್ ಚುನಾವಣೆ

Madhyama Bimba

ಸಹಿಷ್ಣುತೆ, ಸಹಾನುಭೂತಿ ಎಲ್ಲಾ ಧರ್ಮಗಳ ಆಧಾರ: ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪ೦ಡಿತಾಚಾರ್ಯವರ್ಯ -ಎಕ್ಸಲೆ೦ಟ್ ಮೂಡುಬಿದಿರೆಯಲ್ಲಿ ಸರ್ವಧರ್ಮ ಅರಿವು ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More