ಕಾರ್ಕಳ : ತಮಿಳುನಾಡಿನ ಕೊಯಮುತ್ತೂರಿನಲ್ಲಿ ಅ. 16ರಂದು ನಡೆದ ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ (technical project exibition competition) ನಲ್ಲಿ ಕಾರ್ಕಳ, ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ ಸ್ಥಾನ ಪಡೆದು, ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು IOT Based industrial boiler management system ಮಾದರಿ ಪ್ರದರ್ಶಿಸಿದ್ದರು. ಈ ಮೊದಲು ಎಸ್.ಎನ್.ಎಂ. ಪಾಲಿಟೆಕ್ನಿಕ್ (ಸಂವಹನ ವಿಭಾಗ) ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಸೆ. 13 ರಂದು ಐ.ಟಿ.ಐ. ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ನವಥಾಮ್-2024 ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ನಂತರ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ (KPT) ಕಾಲೇಜಿನಲ್ಲಿ ಕರ್ನಾಟಕ ಸರಕಾರದ ಯೋಜನೆಯಡಿಯಲ್ಲಿ ಸೆ. 27ರಂದು ಆಯೋಜಿಸಿದ್ದ ರಾಜ್ಯ ಮಟ್ಟದ ಕೈಗಾರಿಕೆ ಮತ್ತು ತಾಂತ್ರಿಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು.
ರಿತಿಕ್ ಹಿರ್ಗಾನ ಚಿಕ್ಕಲ್‌ಬೆಟ್ಟುವಿನ ರೂಪಾ -ಪ್ರಭಾಕರ್ ಪೂಜಾರಿ ದಂಪತಿಯ ಪುತ್ರ. ಮೂಡುಬಿದಿರೆ ಎಸ್.ಎನ್.ಎಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.