ಕಾರ್ಕಳಹೆಬ್ರಿ

ವರಂಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕಿನ ವರಂಗದ ಅಮರನಾಥ(60) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಅಮರನಾಥ ಇವರಿಗೆ ಯಾವುದೋ ಕಾಯಿಲೆಯಿಂದ ಕಣ್ಣು ಕಾಣಿಸಿದೆ ಇದ್ದು, ಕೆಲಸ ಮಾಡದೇ ಮನೆಯಲ್ಲಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದೆ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕವಾಗಿ ನೊಂದಿದ್ದರು.

ದಿನಾಂಕ 24.10.2024 ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದವರನ್ನು ಕಾರ್ಕಳ ಟಿ.ಎಂ. ಪೈ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕ್ಸಿತೆಯ ಬಗ್ಗೆ ಅಜ್ಜರಕಾಡು ಸರಕಾರಿ ಅಸ್ಪತ್ರೆಯಲ್ಲಿ ದಾಖಲಿಸಿದ್ದು, ದಿನಾಂಕ 28.10.2024 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಲಾವಿದರಿಂದ ಅರ್ಜಿ ಆಹ್ವಾನ

Madhyama Bimba

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ

Madhyama Bimba

ನಕ್ರೆ ಪ್ರೌಢ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More