ಕಾರ್ಕಳ: ನಿಟ್ಟೆ ಗ್ರಾಮದ ದೂಪದಕಟ್ಟೆ ಬೆರಂದೊಟ್ಟು ಕ್ರಾಸ್ಬಳಿ ಹಾದು ಹೋಗುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ನ. ೫ರಂದು ನಡೆದಿದೆ.
KA-14-B-5949 ನಂಬ್ರದ ಕಾರಿನ ಚಾಲಕ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ, ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸುಬಾನ್ ಎಂಬುವವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ KA-20-HD-4229 ನೇ ನಂಬ್ರದ ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನು ರಸ್ತೆಗೆ ಬಿದ್ದು, ಆತನ ತಲೆಗೆ ಗಾಯವಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.