ಕಾರ್ಕಳಹೆಬ್ರಿ

ನ:7 ರಿಂದ ತಾಲೂಕುಗಳಲ್ಲಿ ಪೌತಿ ಅಂದೋಲನ

ಪಹಣಿ ಆಧಾರ್ ಜೋಡಣೆ ಕಾರ್ಯವು ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು, ಸದರಿ ಪ್ರಕ್ರಿಯೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಖಾತಾದಾರರು ಮರಣ ಹೊಂದಿರುವ ಕುರಿತು ತಂತ್ರಾಂಶದಲ್ಲಿ ನಮೂದಿಸಿದ್ದು, ಇಂತಹ ಪ್ರಕರಣಗಳಲ್ಲಿ ಪೌತಿ ಅಥವಾ ವಾರೀಸು ಖಾತೆ ಅಂದೋಲನವನ್ನು ಉಡುಪಿ ತಾಲೂಕಿನಲ್ಲಿ ನವೆಂಬರ್ 7 ರಂದು, ಕುಂದಾಪುರ ತಾಲೂಕಿನಲ್ಲಿ ನವೆಂಬರ್ 8ರಂದು, ಕಾರ್ಕಳ ತಾಲೂಕಿನಲ್ಲಿ ನವೆಂಬರ್ 11 ರಂದು, ಬ್ರಹ್ಮಾವರ ತಾಲೂಕಿನಲ್ಲಿ ನವೆಂಬರ್ 12 ರಂದು, ಬೈಂದೂರು ತಾಲೂಕಿನಲ್ಲಿ ನವೆಂಬರ್ 13 ರಂದು, ಕಾಪು ತಾಲೂಕಿನಲ್ಲಿ ನವೆಂಬರ್ 14 ರಂದು ಹಾಗೂ ಹೆಬ್ರಿ ತಾಲೂಕಿನಲ್ಲಿ ನವೆಂಬರ್ 15 ರಂದು ಆಯಾಯ ತಾಲೂಕಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಜಿಲ್ಲೆಯಲ್ಲಿ ಪೌತಿ/ ವಾರೀಸು ಖಾತೆ ಮಾಡಲು ಬಾಕಿ ಇರುವ ಜಮೀನಿನ ವಾರೀಸುದಾರರು ಆಯಾಯ ತಾಲ್ಲೂಕು ಕಛೇರಿ ಅಥವಾ ತಮ್ಮ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಗಳನ್ನು ತಕ್ಷಣವೇ ಸಂಪರ್ಕಿಸಿ ಮಾಹಿತಿಯನ್ನು ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಪೌತಿ ಅಂದೋಲನದಲ್ಲಿ ಭಾಗವಹಿಸುವಂತೆ ಹಾಗೂ ಈ ಪೌತಿ ಅಂದೋಲನದಡಿ ಜಮೀನಿನ ದಾಖಲೆಗಳನ್ನು ಪಹಣಿಯಲ್ಲಿ ಇಂಧೀಕರಿಸಲು ಕ್ರಮ ಕೈಗೊಳ್ಳಲಾಗುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

 

Related posts

ನಿಟ್ಟೆ ಬಳಿ ಕಾರು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ: ಗಾಯ

Madhyama Bimba

ಬೋಳ ನಿವಾಸಿ ಜೀವನ್ ಆತ್ಮಹತ್ಯೆ

Madhyama Bimba

ಮರ್ಣೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More