ಬಿಜೆಪಿಯಲ್ಲಿ ಸಕ್ರೀಯರಾಗಿದ್ದ ನೆಲ್ಲಿಕಾರು ಗ್ರಾಮದ ನಾಗೇಶ್ ಮಯ್ಯ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮೂಡುಬಿದ್ರೆ ಬ್ಲಾಕ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾದ ಎಸ್. ಪ್ರವೀಣ್ ಕುಮಾರ್ ಶಿರ್ತಾಡಿ, ನೆಲ್ಲಿಕಾರು ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ, ಮಾಜಿ ಉಪಾಧ್ಯಕ್ಷ ಶಶಿಧರ್ ಎಂ. ಮಾಂಟ್ರಾಡಿ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾರ್ಡ್ ಈ ಸಂದರ್ಭದಲ್ಲಿದ್ದರು.
ಬಿಜೆಪಿಯಲ್ಲಿ ಅತೃಪ್ತರಾದ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಗೊಳ್ಳಲು ಉತ್ಸಾಹ ತೋರಿರುವುದಾಗಿ ಬ್ಲಾಕ್ ಅಧ್ಯಕ್ಷ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.