ಪ್ರಸ್ತುತ ಸಾಲಿನ ಮತದಾರರ ವಿಶೇಷ ಸಂಕ್ಷಿಪ್ತ ಪಟ್ಟಿ ಪರಿಷ್ಕರಣೆಯು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ನವೆಂಬರ್ 9,10,23 ಹಾಗೂ 24ರಂದು ತಮ್ಮ ಎಲ್ಲಾ ಮತಗಟ್ಟೆಗಳಲ್ಲಿ ಹಾಜರಿದ್ದು, ಕಾರ್ಯನಿರ್ವಹಿಸಲಿದ್ದಾರೆ.
ಅರ್ಹ ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಯ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರು, ಮತದಾರರ ಪಟ್ಟಿಯಲ್ಲಿದೇಯೇ ಎಂದು ಪರಿಶೀಲಿಸಿಕೊಳ್ಳಬಹುದಾಗಿದೆ ಹಾಗೂ 18ವರ್ಷ ಪೂರೈಸಿದ ಮತದಾರರು ಅಗತ್ಯ ದಾಖಲೆಗಳನ್ನು ನೀಡಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.