ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೌಕಿಯಂಗಡಿ ಮಾಳ ಇಲ್ಲಿನ ಪೌಷ್ಠಿಕ ವನಕ್ಕೆ ನೀರು ಸರಬರಾಜು ಟ್ಯಾಂಕ್ 2000ಲೀಟರ್ ಕೊಡುಗೆಯಾಗಿ ನೀಡಲಾಯಿತು.
ಇದರ ಹಸ್ತಾಂತರ ಕಾರ್ಯಕ್ರಮವು ನ.7 ರಂದು ನಡೆಯಿತು.
ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ ಭರತೇಶ್ ಆದಿರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು ಹಾಗು ಶಾಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ, ಕಾರ್ಯದರ್ಶಿ ಪ್ರಶಾಂತ್ ಜೈನ್, ಮಾಧವಿ ಕೆ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರಾದ ಭುಜಂಗ ಸ್ವಾಗತಿಸಿದರು, ಎಸ್ ಡಿ ಎಂ ಸಿ ಅಧ್ಯಕ್ಷರಾದ ಚಂದ್ರನಾಥ ಇಂದ್ರ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಮಂಜುಳಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಹೊಸ್ಮಾರ್ ಸಿ ಆರ್ ಪಿ ಕೃಷ್ಣಕುಮಾರ್ ಉಪಸ್ಥಿತರಿದ್ದರು.