(ಜಿಲ್ಲಾಮಟ್ಟದ ಕ್ರೀಡಾಕೂಟ – ಕಲ್ಯಾ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ)
ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ, ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿಗಳಾದ ಸಿಯಾನ್ ಮತ್ತು ಶಿಕ್ಷಾ 80 ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ