ಮೂಡುಬಿದಿರೆ

ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ- ಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಅವಳಿ ಪ್ರಶಸ್ತಿ,ಯೆನೆಪೋಯ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಮತ್ತು ದೇಹದಾಢ್ಯ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಆಳ್ವಾಸ್ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿತು.

ವೇಯ್ಟ್ ಲಿಫ್ಟಿಂಗ್ ನಲ್ಲಿ ದ್ವಿತೀಯ ಸ್ಥಾನವನ್ನು ಎನ್‌ಎಮ್‌ಎಎಮ್‌ಐಟಿ ನಿಟ್ಟೆ, ತೃತೀಯ ಸ್ಥಾನವನ್ನು ಯೆನಪೋಯ ಮೂಡುಬಿದಿರೆ ಇವರು ಪಡೆದುಕೊಂಡರು. ಬಾಲಕಿಯರ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಯೆನೆಪೋಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮೂಡುಬಿದಿರೆ, ದ್ವಿತೀಯ ಸ್ಥಾನವನ್ನು ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರು, ತೃತೀಯ ಸ್ಥಾನವನ್ನು ಎನ್‌ಐಇ ಮೈಸೂರು ಪ್ರಶಸ್ತಿಯನ್ನು ಪಡೆಯಿತು. ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಕೆಎಲ್‌ಎಸ್ ಗೋಗಟೆ ತಾಂತ್ರಿಕ ಕಾಲೇಜು ಬೆಳಗಾವಿ, ತೃತೀಯ ಸ್ಥಾನವನ್ನು ಜಿಎಮ್ ತಾಂತ್ರಿಕ ಕಾಲೇಜು, ದಾವಣಗೆರೆ ಪಡೆದುಕೊಂಡಿತು.


ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸಿನ ಭರತ್ ಪ್ರಶಸ್ತಿಯನ್ನು ಪಡೆದರು.


ಬಹುಮಾನ ವಿತರಣಾ ಸಮಾರಂಭದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರಿನ ಪ್ರಾಂಶುಪಾಲರಾದ ಡಾ. ಪೀಟರ್ ಫೆರ್ನಾಂಡಿಸ್, ವಿಟಿಯು ವೀಕ್ಷಕರಾಗಿ ನಿಟ್ಟೆ ಕಾಲೇಜಿನ ಶ್ಯಾಮ್ ಸುಂದರ್ ಉಪಸ್ಥಿತರಿದ್ದರು. ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.


ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

 

Related posts

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Madhyama Bimba

ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವಕ್ಕೆ ಹಲವು ಆಕರ್ಷಣೆ

Madhyama Bimba

ಶ್ರೀ ಮಹಾವೀರ ಕಾಲೇಜಿನಲ್ಲಿ ಮುಂದುವರೆದ ಉದ್ಯೋಗ ಮೇಳ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More